ಹೆಬ್ರಿ: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಜೀವನ ಹೇಗೆ ರೂಪಿಸಿಕೊಳ್ಳಬೇಕು ಎಂಬುವುದನ್ನು ಕಲಿಸುತ್ತದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಬೇಕು ಎಂದು ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಹೇಳಿದರು.

ಹೆಬ್ರಿಯ ಕುಚ್ಚೂರು ಹೆರ್ಗ ವಿಠಲಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೋಟ್ ಪುಸ್ತಕ ವಿತರಿಸಿ, ಎಸ್ಎಸ್ಎಲ್ಸಿ ಸಾಧಕರಿಗೆ ಹಾಗೂ ದಾನಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.

ಸಾಧಕ ವಿದ್ಯಾರ್ಥಿಗಳಾದ ತಸ್ವಿ ಡಿ. ಶೆಟ್ಟಿ, ವೈಷ್ಣವಿ, ಜಯಶ್ರೀ, ಸುದೀಕ್ಷಾ, ಅಕ್ಷತಾ, ಹನಿಯ, ಕೀರ್ತನ ಶೆಟ್ಟಿ, ಅಜಯ್, ಜೇನಿಷಾ, ಅರ್ಚನಾ, ದಿಗಂತ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ಶಾಲೆಗೆ ಕೊಡುಗೆ ನೀಡಿದ ಪ್ರಸನ್ನಕುಮಾರ ಶೆಟ್ಟಿ, ಶಾಂತಿನಿಕೇತನ ಯುವ ವೃಂದದ ಮಾಜಿ ಅಧ್ಯಕ್ಷ ದೀಕ್ಷಿತ್ ನಾಯಕ್, ಅರುಣ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಟ್ರಸ್ಟ್ ವತಿಯಿಂದ ‘ಎ’ಪ್ಲಸ್ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರ್ಷ ಶೆಟ್ಟಿ ಬೇಳಂಜೆ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಪ್ರಸನ್ನ ಶೆಟ್ಟಿ, ಮುಖ್ಯ ಶಿಕ್ಷಕಿ ಪ್ರಭಾವತಿ, ಭೂತುಗುಂಡಿ ಕರುಣಾಕರ ಶೆಟ್ಟಿ, ಗ್ರಾ.ಪಂ. ಉಪಾಧ್ಯಕ್ಷ ಮಹೇಶ ಶೆಟ್ಟಿ ಬಾದ್ಲು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.