ಶನಿವಾರ, ಅಕ್ಟೋಬರ್ 1, 2022
20 °C

ನಾನು ಮಿಸ್ ಇಂಡಿಯಾ ಆಗಲು ಮಾರಿಯಮ್ಮ ದೇವಿ ಕಾರಣ: ಸಿನಿ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಪು (ಪಡುಬಿದ್ರಿ): ‘ಫೆಮಿನಾ ಮಿಸ್ ಇಂಡಿಯಾ ಆಗಿರುವುದಕ್ಕೆ ಮಾರಿಯಮ್ಮ ದೇವಿಯ ಅನುಗ್ರಹವೇ ಕಾರಣ’ ಎಂದು ಫೆಮಿನಾ ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಹೇಳಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ ಅವರು ದೇವಿಯ ದರ್ಶನ ಪಡೆದರು.

‘ಹೊಸ ಮಾರಿಗುಡಿ ದೇಗುಲ ಜೀರ್ಣೋದ್ಧಾರಗೊಳ್ಳುತ್ತಿದ್ದು, ತಮ್ಮ ಕುಟುಂಬದ ವತಿಯಿಂದ 99 ಶಿಲಾ ಸೇವೆ ನೀಡುತ್ತಿದ್ದೇವೆ. ಭಕ್ತರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.  

ಸಿನಿ ಶೆಟ್ಟಿ ತಂದೆ ಸದಾನಂದ ಶೆಟ್ಟಿ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾಪು ದಿವಾಕರ ಶೆಟ್ಟಿ, ಮನೋಹರ ಶೆಟ್ಟಿ, ಗಂಗಾಧರ ಸುವರ್ಣ, ಯೋಗೀಶ್ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ದೊರಕಳಗುತ್ತು, ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ರತ್ನಾಕರ ಹೆಗ್ಡೆ ಕಲೀಲಬೀಡು, ರಮೇಶ್ ಶೆಟ್ಟಿ ಕೊಲ್ಯ, ಲೀಲಾಧರ ಶೆಟ್ಟಿ, ನಿರ್ಮಲ್ ಕುಮಾರ್ ಹೆಗ್ಡೆ, ಜಗದೀಶ್ ಬಂಗೇರ, ಶಿಲ್ಪಾ ಜಿ. ಸುವರ್ಣ, ಗೌರವ್ ಶೇಣವ ಇದ್ದರು.


ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಫೆಮಿನಾ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ಮಂಗಳವಾರ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಅರ್ಚಕ ಶ್ರೀಧರ ತಂತ್ರಿ ಅವರನ್ನು ಗೌರವಿಸಿದರು. ಸಿನಿ ಶೆಟ್ಟಿ ತಂದೆ ಸದಾನಂದ ಶೆಟ್ಟಿ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು