ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಮ ಉಲ್ಲಂಘನೆ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ

Last Updated 14 ಜನವರಿ 2022, 14:29 IST
ಅಕ್ಷರ ಗಾತ್ರ

ಉಡುಪಿ: ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ 20 ಕಾಂಗ್ರೆಸ್‌ ಮುಖಂಡರ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.12ರಂದು ಕೋಟತಟ್ಟು ಕೊರಗ ಕಾಲೊನಿಯಲ್ಲಿ ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಮುಖಂಡರು ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.

ಈ ಸಂದರ್ಭ ಕೋವಿಡ್‌ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಜಿಲ್ಲಾಡಳಿತ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT