ರೊಬೊ ಸಾಫ್ಟ್ನಲ್ಲಿ ಬೆಂಕಿ ಅವಘಡ
ಉಡುಪಿ: ಸಂತೆಕಟ್ಟೆಯಲ್ಲಿರುವ ರೊಬೊಸಾಫ್ಟ್ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ.
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.