ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಾರರ ಗ್ರಾಮಗಳ ಅಭಿವೃದ್ಧಿಗೆ ತಲಾ ₹ 7.5 ಕೋಟಿ: ಸಚಿವ ಮುರುಗನ್

Last Updated 17 ಅಕ್ಟೋಬರ್ 2021, 14:12 IST
ಅಕ್ಷರ ಗಾತ್ರ

ಉಡುಪಿ: ಮೀನುಗಾರರು ವಾಸವಿರುವ ಗ್ರಾಮಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಗೆ ತಲಾ ₹ 7.5 ಕೋಟಿ ಅನುದಾನ ನೀಡಲಾಗುವುದು ಎಂದು ಕೇಂದ್ರದ ಮೀನುಗಾರಿಕೆ ಹಾಗೂ ಪಶುಸಂಗೋಪನಾರಾಜ್ಯ ಖಾತೆ ಸಚಿವ ಡಾ.ಎಲ್‌.ಮುರುಗನ್ ತಿಳಿಸಿದರು.

ಭಾನುವಾರ ಮಲ್ಪೆ ಬಂದರಿನಲ್ಲಿ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇಗ್ರಾಮಗಳನ್ನು ಗುರುತಿಸಲು ಮೀನುಗಾರಿಕಾ ಇಲಾಖೆಗೆ ಸೂಚನೆ ನೀಡಲಾಗಿದೆ. ಮೀನುಗಾರರ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಕುಟುಂಬಗಳಿಗೆ ಉಚಿತ ಆರೋಗ್ಯ ಸೌಲಭ್ಯಗಳು ಸಿಗಲಿವೆ ಎಂದರು.

ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕ ಮೀನುಗಾರಿಕಾ ಕ್ಷೇತ್ರದಲ್ಲಿ ₹ 725 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು. ಮೀನುಗಾರಿಕೆಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಹಾಗೂಮತ್ಸ್ಯೋದಮಕ್ಕೆಉತ್ತೇಜನನೀಡಲು ರಾಷ್ಟ್ರೀಯ ಕಡಲು ಮೀನುಗಾರಿಕಾ ಮಸೂದೆ ಜಾರಿಗೊಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿಮೀನುಗಾರಿಕಾಸಚಿವಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ರಘುಪತಿ ಭಟ್‌, ಕಾಪು ಶಾಸಕ ಲಾಲಾಜಿ ಮೆಂಡನ್‌, ಇಲಾಖೆಹಿರಿಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT