ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೀನುಗಾರರ ಸಮಸ್ಯೆ: ಬೆಂಗಳೂರಿನಲ್ಲಿ ಸಭೆ

Published 20 ಜೂನ್ 2024, 23:30 IST
Last Updated 20 ಜೂನ್ 2024, 23:30 IST
ಅಕ್ಷರ ಗಾತ್ರ

ಉಡುಪಿ: ಕರಾವಳಿಯ ಮೀನುಗಾರರ ವಿವಿಧ ಸಮಸ್ಯೆಗಳು, ಅವರ ಬೇಡಿಕೆಗಳ ಕುರಿತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಿತು.

ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಚಿವರನ್ನು ಭೇಟಿಯಾಗಿ ರಾಜ್ಯದ ಎಲ್ಲಾ ಮೀನುಗಾರಿಕಾ ಬಂದರಿಗೆ ಸಂಬಂಧಿಸಿದ ರಸ್ತೆ, ಮೂಲ ಸೌಕರ್ಯ ಅಭಿವದ್ಧಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

1984 ಮೀನುಗಾರಿಕಾ ಕಾಯ್ದೆಯ ನಿಯಮಾವಳಿಗಳನ್ನು ಪ್ರಸ್ತುತ ಸಾಲಿಗೆ ಪೂರಕವಾಗುವಂತೆ ತಿದ್ದುಪಡಿ ಮಾಡಬೇಕು, ಬಂದರಿನ ಸಮರ್ಪಕ ನಿರ್ವಹಣೆ ಹಿತದೃಷ್ಟಿಯಿಂದ ಸ್ಥಳೀಯ ಮೀನುಗಾರಿಕಾ ಸಂಘ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಬೇಕು,  ಪ್ರತಿದಿನದ ಡೀಸೆಲ್ ಕೋಟವನ್ನು 500 ಲೀಟರಿಗೆ ಏರಿಕೆ ಮಾಡಬೇಕು, ಮಹಿಳಾ ಮೀನುಗಾರರಿಗೆ ಬಡ್ಡಿರಹಿತ ಸಾಲ, ಮೀನು ಒಣಗಿಸುವ ಸ್ಥಳವನ್ನು ರಿಯಾಯಿತಿ ದರದಲ್ಲಿ ಕನಿಷ್ಠ 15 ವರ್ಷಕ್ಕೆ ಗುತ್ತಿಗೆ ನೀಡಬೇಕು ಎಂದು ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಚಿವರನ್ನು ಒತ್ತಾಯಿಸಿದರು.

ಮೀನುಗಾರಿಕಾ ಬೋಟ್ ವಿಮೆಯ ನಿಯಮಾವಳಿ ಸರಳೀಕರಣ, ವಿಮಾ ಪರಿಹಾರ ಮೊತ್ತವನ್ನು ಶೀಘ್ರ ಮಂಜೂರು ಮಾಡಲು ಕ್ರಮ ಕೈಗೊಳ್ಳುವ ಕುರಿತು ಹಾಗೂ ಮಲ್ಪೆ ಮೀನುಗಾರಿಕಾ ಬಂದರಿನ ಔಟರ್ ಹಾರ್ಬರ್ ಯೋಜನೆ ಮಂಜೂರು ವಿಚಾರವಾಗಿಯೂ ಚರ್ಚಿಸಲಾಯಿತು.

ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕಲ್ಲೇರ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ರಾಮಚಂದ್ರ ಕುಂದರ್, ಸೋಮನಾಥ ಕಾಂಚನ್, ಮೋಹನ್ ಬೆಂಗ್ರೆ, ಚೇತನ್ ಬೆಂಗ್ರೆ, ನವೀನ್ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT