ಉಚ್ಚಿಲ ಅಧ್ಯಕ್ಷರ ಬದಲಾವಣೆಗೆ ಪಟ್ಟು

7
ಗ್ರಾಮ ಪಂಚಾಯಿತಿ ಸದಸ್ಯರ ಸಭಾತ್ಯಾಗ

ಉಚ್ಚಿಲ ಅಧ್ಯಕ್ಷರ ಬದಲಾವಣೆಗೆ ಪಟ್ಟು

Published:
Updated:

ಪಡುಬಿದ್ರಿ: ಉಚ್ಚಿಲ ಬಡಾ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದು ಶನಿವಾರ ನಡೆಯಬೇಕಿದ್ದ ಸಾಮಾನ್ಯ ಸಭೆಗೆ 12 ಜನ ಸದಸ್ಯರು ಸಭಾತ್ಯಾಗ ಮಾಡಿದರು.

ಉಚ್ಚಿಲ ಬಡಾ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಸಹಿತ ಬಿಜೆಪಿ ಬೆಂಬಲಿತ 14 ಹಾಗೂ ಕಾಂಗ್ರೆಸ್ ಬೆಂಬಲಿತ 6 ಹಾಗೂ ಒಬ್ಬ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಅಧ್ಯಕ್ಷೆಯಾಗಿ ಬಿಜೆಪಿ ನಾಗರತ್ನ ಎ ಕರ್ಕೇರ ಆಯ್ಕೆಯಾಗಿದ್ದರು. ಇದೀಗ ಅಧ್ಯಕ್ಷರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಬೆಂಬಲಿತರು ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ಹಿಂದೆ ಕೋರಂ ಕೊರತೆಯಿಂದ ಜುಲೈ 30 ಹಾಗೂ ಆಗಸ್ಟ್ 1 ರಂದು ಸಾಮಾನ್ಯ ಸಭೆ ಎರಡು ಬಾರಿ ಮುಂದೂಡಲ್ಪಟ್ಟಿತ್ತು. ಶನಿವಾರ ನಡೆದ ಸಭೆಯಲ್ಲಿ ಅಧ್ಯಕ್ಷೆ ನಾಗರತ್ನ ಎ ಕರ್ಕೇರ, ಬಿಜೆಪಿ ಬೆಂಬಲಿತ 12 ಸದಸ್ಯರು, ಕಾಂಗ್ರೆಸ್ ಬೆಂಬಲಿತ 6 ಸದಸ್ಯರು ಹಾಜರಾಗಿದ್ದರು. ಬಿಜೆಪಿ ಬೆಂಬಲಿತ ಒಬ್ಬ ಸದಸ್ಯೆ ಹಾಗೂ ಎಸ್‌ಡಿಪಿಐ ಬೆಂಬಲಿತ ಸದಸ್ಯರೊಬ್ಬರು ಗೈರು ಹಾಜರಿ ಆಗಿದ್ದರು. ಸಭೆಗೆ ಬಂದಿದ್ದ ಬಿಜೆಪಿ ಬೆಂಬಲಿತ ಸದಸ್ಯರು ಸಭೆಯ ನಡಾವಳಿ ದಾಖಲೆ ಪುಸ್ತಕದಲ್ಲಿ ಸಹಿ ಮಾಡಿ ಹೊರ ನಡೆದಿದ್ದು, ಸಭೆ ಮೊಟಕುಗೊಂಡಿದೆ.

ಅಧ್ಯಕ್ಷರ ಬದಲಾವಣೆ ಮಾಡುವಂತೆ 15 ಜನ ಸದಸ್ಯರು ಸಹಿ ಮಾಡಿ ಆಗಸ್ಟ್ 31 ರಂದು ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಮುಂದಿನ 30 ದಿನಗಳೊಳಗೆ ತೀರ್ಮಾನಿಸಿ ಅವರು ಸಭೆ ಕರೆಯಲಿದ್ದಾರೆ. ಅಂದಿನ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳುತ್ತೇವೆ. ಆ ಬಳಿಕ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಿನಾಂಕ ಗೊತ್ತು ಪಡಿಸಲಿದ್ದಾರೆ ಎಂದು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯ ಚಂದ್ರಶೇಖರ ಕೋಟ್ಯಾನ್ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !