ಕಾರ್ಕಳ: ಇಲ್ಲಿನ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ವಾಸಿಸುತ್ತಿದ್ದ ಮಹಿಳೆಯೊಬ್ಬರು ವಿಷಾಹಾರದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮೃತಪಟ್ಟಿದ್ದಾರೆ.

ಉಚ್ಚಂಗಿ ನಗರ ನಿವಾಸಿ ಮೋಹಿನಿ (32) ಮೃತಪಟ್ಟವರು. ಅವರನ್ನು ಚಿಕಿತ್ಸೆಗಾಗಿ ನಕ್ರೆ ಪ್ರಾಥಮಿಕ ಆಸ್ಫತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ತಾಲ್ಲೂಕು ಆಸ್ಫತ್ರೆಗೆ ದಾಖಲಿಸಲಾಗಿತ್ತು. ಅನಂತರ ಮಂಗಳೂರಿನ ವೆನ್ಲಾಕ್ ಆಸ್ಫತ್ರೆಗೆ ದಾಖಲಿಸಿದ್ದು ಅಲ್ಲಿ ಅವರು ಮೃತಪಟ್ಟಿದ್ದಾರೆ .

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೋಹಿನಿ ಅವರು ಎರಡು ವರ್ಷಗಳಿಂದ ನಮ್ಮ ಶಾಲೆಯಲ್ಲಿ ವಾಸಿಸುತ್ತಿದ್ದರು, ಅವರಿಗೆ ಕಡಿಮೆ ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆಯೂ ಇತ್ತು. ಈಚೆಗೆ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಾವು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದೆವು. ಶಾಲೆಯಲ್ಲಿ ವಾಸಿಸುವ ಬೇರೆ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ’ ಎಂದು ಶಾಲೆಯ ಶಿಕ್ಷಕಿ ಕಾಂತಿ ಹರೀಶ್ ತಿಳಿಸಿದ್ದಾರೆ.

‘ಮರಣೋತ್ತರ ಪರೀಕ್ಷೆ ಪೂರ್ಣಗೊಂಡು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವಿಶ್ಲೇಷಣೆ ಆದ ಬಳಿಕ ಮಹಿಳೆಯ ಸಾವಿನ ನಿಖರ ಕಾರಣ ತಿಳಿಯಲಿದೆ. ಅವರಿಗೆ ಕೆಲವು ಆರೋಗ್ಯ ಸಮಸ್ಯೆಗಳಿದ್ದವು ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.