ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಭಿವೃದ್ಧಿ ಕಾಮಗಾರಿಗೆ ವಿರೋಧ ಬೇಡ’

ವರಂಗ ಗ್ರಾಮದ ಅಡ್ಕದಲ್ಲಿ ರಸ್ತೆ ಕಾಮಗಾರಿಗೆ ಸುನಿಲ್‌ ಕುಮಾರ್ ಗುದ್ದಲಿ ಪೂಜೆ
Last Updated 5 ಡಿಸೆಂಬರ್ 2022, 5:00 IST
ಅಕ್ಷರ ಗಾತ್ರ

ಹೆಬ್ರಿ: ಬಹುಕಾಲದ ಬೇಡಿಕೆಯಂತೆ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವರಂಗ ಗ್ರಾಮದ ಬಹುತೇಕ ಭೂಭಾಗವು ವರಂಗ ಜೈನಮಠದ ಸ್ವಾಧೀನದಲ್ಲಿರುವುದರಿಂದ ಸರ್ಕಾ ರದಿಂದ ರಸ್ತೆ ಅಭಿವೃದ್ಧಿ ಮಾಡಲು ತೊಡಕಾಗಿತ್ತು. ಜಿಲ್ಲಾಧಿಕಾರಿ ವರಂಗದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಇಲ್ಲಿನ ಸಮಸ್ಯೆಗಳ ಅಧ್ಯಯನ ಮಾಡಿ ವರದಿ ನೀಡಿದ್ದಾರೆ. ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಹೆಬ್ರಿ ತಾಲ್ಲೂಕು ವರಂಗ ಗ್ರಾಮದ ಅಡ್ಕದಲ್ಲಿ ಭಾನುವಾರ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಅಭಿವೃದ್ಧಿ ಕಾರ್ಯಗಳಿಗೆ ಯಾರೂ ವಿರೋಧ ಮಾಡಬಾರದು ಎಂಬ ತೀರ್ಮಾನ ಕೈಗೊಳ್ಳಲಾಗಿದೆ. ₹ 55 ಲಕ್ಷ ಅನುದಾನದಲ್ಲಿ ವರಂಗ ಅಡ್ಕ-ಬಲ್ಲಾಡಿ ರಸ್ತೆ ಅಭಿವೃದ್ಧಿಗೆ ₹ 25 ಲಕ್ಷ, ಅಡ್ಕ ಚತುರ್ಮುಖ ಬ್ರಹ್ಮಲಿಂಗೇಶ್ವರ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ₹ 25 ಲಕ್ಷ, ಹೊಸಬೆಟ್ಟು-ದುಗ್ಗಬೆಟ್ಟು ರಸ್ತೆ ಅಭಿವೃದ್ಧಿಗೆ ₹ 5 ಲಕ್ಷ ವೆಚ್ಚ ತೆಗೆದಿರಿಸಲಾಗುವುದು ಎಂದು ಅವರು ಹೇಳಿದರು.

ಚತುರ್ಮುಖ ಬಸದಿ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಸ್ಥಳಬಿಟ್ಟು ಕೊಟ್ಟ 5 ಮಂದಿ ದಾನಿಗಳನ್ನು ಗೌರವಿಸಲಾಯಿತು. ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ್, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ವರಂಗ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರುತಿ ಆದರ್ಶ ಶೆಟ್ಟಿ, ಶಶಿಧರ್, ಸಂತೋಷ್, ರತ್ನ ಪೂಜಾರಿ, ಲೀಲಾವತಿ, ಅಪ್ಪಿ ಸೇರಿಗಾರ್ತಿ ಇದ್ದರು. ಸುರೇಂದ್ರ ಸ್ವಾಗತಿಸಿದರು. ಸುಹಾಸ್ ಶೆಟ್ಟಿ ಮುಟ್ಲುಪಾಡಿ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT