ಬೈಂದೂರು (ಉಡುಪಿ): ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ (84) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ಬೆಂಗಳೂರಿನ ನಿವಾಸದಲ್ಲಿ ನಿಧನರಾದರು.
ಕೆ. ಲಕ್ಷ್ಮಿನಾರಾಯಣ ಕುಂದಾಪುರದವರು. ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರರಾಗಿದ್ದ ಅವರು, ಬೆಂಗಳೂರಿನಲ್ಲಿ ಶ್ರೀ ಲಕ್ಷ್ಮಿ ಕನ್‌ಸ್ಟ್ರಕ್ಷನ್ ಸಂಸ್ಥೆ ಸ್ಥಾಪಿಸಿದ್ದರು. ಬಳಿಕ, ರಾಜಕೀಯಕ್ಕೆ ಪ್ರವೇಶಿಸಿ, 2008ರಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯ ಗಳಿಸಿದ್ದರು.
ವಿಶ್ವ ರಾಮಕ್ಷತ್ರಿಯ ಮಹಾಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ವಿವಿಧ ಸಂಘ–ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.