ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಮಾಜಿ ಶಾಸಕಿ ವಿನ್ನಿಫ್ರೆಡ್‌ ಫೆರ್ನಾಂಡಿಸ್‌ ನಿಧನ

Last Updated 28 ಏಪ್ರಿಲ್ 2020, 13:45 IST
ಅಕ್ಷರ ಗಾತ್ರ

ಕುಂದಾಪುರ: ಕಾಂಗ್ರೆಸ್‌ ಹಿರಿಯ ನಾಯಕಿ ಹಾಗೂ ಮಾಜಿ ಶಾಸಕಿ ವಿನ್ನಿಫ್ರೆಡ್‌ ಫೆರ್ನಾಂಡಿಸ್‌ (91) ಅಲ್ಪಕಾಲದ ಅಸೌಖ್ಯದಿಂದಾಗಿ ಇಲ್ಲಿನ ಚರ್ಚ್‌ ರಸ್ತೆಯನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು.

ಮೃತರಿಗೆ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಗುರುವಾರ ಬೆಳಿಗ್ಗೆ 10ಗಂಟೆಗೆ ಕುಂದಾಪುರದ ಹೋಲಿ ರೋಜರಿ ಇಗರ್ಜಿಯಲ್ಲಿ ಅಂತ್ಯವಿಧಿವಿಧಾನಗಳು ನಡೆಯಲಿದೆಕುಟುಂಬದ ಮೂಲಗಳು ತಿಳಿಸಿವೆ.

ಉದ್ಯಮಿ ಲೂಯಿಸ್‌ ಎಂ.ಫೆರ್ನಾಂಡಿಸ್‌ ಅವರ ಪತ್ನಿಯಾದ ವಿನ್ನಿಫ್ರೆಡ್‌ ಫೆರ್ನಾಂಡಿಸ್‌ ಪ್ರಜಾ ಸೋಷಲಿಸ್ಟ್‌ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು.ಕುಂದಾಪುರ ಪಟ್ಟಣ ಪಂಚಾಯಿತಿ, ಪುರಸಭೆ ಸದಸ್ಯೆ, ಅಧ್ಯಕ್ಷೆಯಾಗಿದ್ದ ಅವರು 1972ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2001ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT