ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪಾದಕ ಬುಖಾರಿ ಹತ್ಯೆ: ಸಿ.ಸಿ ಟಿ.ವಿಯಲ್ಲಿ ಸೆರೆಯಾದ ಶಂಕಿತರ ಚಿತ್ರ ಬಿಡುಗಡೆ

Last Updated 15 ಜೂನ್ 2018, 6:12 IST
ಅಕ್ಷರ ಗಾತ್ರ

ಶ್ರೀನಗರ:ಖ್ಯಾತ ಪತ್ರಕರ್ತ ಮತ್ತು ‘ರೈಸಿಂಗ್ ಕಾಶ್ಮೀರ್‌’ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಅವರನ್ನು ಅಪರಿಚಿತ ಬಂದೂಕುಧಾರಿಯೊಬ್ಬ ಗುರುವಾರ ಗುಂಡಿಟ್ಟು ಹತ್ಯೆ ಮಾಡಿರುವ ಸಂಬಂಧ ದಾಳಿಯಲ್ಲಿ ಭಾಗಿಯಾಗಿದ್ದವರ ಪತ್ತೆಗೆ ಪೊಲೀಸರು ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಇಲ್ಲಿನ ಪ್ರೆಸ್‌ ಕಾಲೊನಿಯಲ್ಲಿ ಶುಜಾತ್‌ ಬುಖಾರಿ ಅವರ ಹತ್ಯೆ ವೇಳೆ ಅವರ ಖಾಸಗಿ ಭದ್ರತಾ ಅಧಿಕಾರಿಯೂ ಗುಂಡೇಟಿಗೆ ಬಲಿಯಾಗಿದ್ದಾರೆ.

ಘಟನೆ ಸಂಬಂಧ ದಾಳಿಕೋರರ ಪತ್ತೆಗೆ ಸ್ಥಳೀಯರ ನೆರವು ಕೋರಿರುವ ಜಮ್ಮು ಕಾಶ್ಮೀರ ಪೊಲೀಸರು, ಸಿ.ಸಿ ಟಿ.ವಿಯ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಮೂವರು ಬೈಕ್‌‌ನಲ್ಲಿ ತೆರಳುತ್ತಿರುವವ ಚಲನವಲನಗಳನ್ನು ಗಮನಿಸಿರುವ ಪೊಲೀಸರು, ಆ ಶಂಕಿತರ ಛಾಯಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT