ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ಗೆ (ಮಾಹೆ) ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಅವರು ಶನಿವಾರ ಭೇಟಿ ನೀಡಿದರು.

ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಅಧ್ಯಾಪಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಗ್ರ ಅಭಿವೃದ್ಧಿ, ವಿಶ್ವಮಟ್ಟದ ಮೂಲಸೌಕರ್ಯ ಮತ್ತು ವೈವಿಧ್ಯಮಯ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಮಾಹೆ ತೋರಿಸಿರುವ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತದ ವಿಸ್ತರಿಸುತ್ತಿರುವ ಶೈಕ್ಷಣಿಕ ಮತ್ತು ಆರೋಗ್ಯದ ಅವಶ್ಯಕತೆಗಳನ್ನು ಪೂರೈಸುವಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು.

ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ಪರಮೇಶ್ವರ ಅವರನ್ನು ಸ್ವಾಗತಿಸಿದರು. ಮಾಹೆ ರಿಜಿಸ್ಟ್ರಾರ್ ಡಾ. ಗಿರಿಧರ ಕಿಣಿ ವಂದಿಸಿದರು. ಡಾ. ನರಾಯಣ ಸಭಾಹಿತ್ ಉಪಸ್ಥಿತರಿದ್ದರು.

ಜಿ. ಪರಮೇಶ್ವರ ಅವರು ಆಧುನಿಕ ಕ್ರೀಡಾಂಗಣ ಮರೇನಾದ ಸೌಲಭ್ಯಗಳನ್ನು ವೀಕ್ಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.