ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಬಿ.ವೈ. ರಾಘವೇಂದ್ರ ಸಿ.ಎಂ ಭೇಟಿ: ಅವಘಡ ಪರಿಹಾರಕ್ಕೆ ಮನವಿ

Published 15 ನವೆಂಬರ್ 2023, 14:35 IST
Last Updated 15 ನವೆಂಬರ್ 2023, 14:35 IST
ಅಕ್ಷರ ಗಾತ್ರ

ಕುಂದಾಪುರ: ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಅಗ್ನಿ ಅವಘಡದಲ್ಲಿ ನಷ್ಟಕ್ಕೆ ಒಳಗಾದವರಿಗೆ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ನ. 13ರಂದು ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ 8 ಪರ್ಸಿನ್ ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿಯಾಗಿve. 2 ಡಿಂಗಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿರುವ ಮೀನುಗಾರರು ಅವಘಡದಿಂದ ಆಘಾತ ಹೊಂದಿದ್ದಾರೆ. ಆದ್ದರಿಂದ ಹಾನಿಗೊಳಗಾದ ದೋಣಿಗಳಿಗೆ ಕೂಡಲೇ ₹10 ಕೋಟಿ ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT