ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಿಂದ ಸಮಾಜದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ಉಂಟಾಗಿದ್ದು, ಈ ಜಿಹಾದಿ ಕೃತ್ಯ ಎಸಗಿದವರು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದೆ. ಇದೊಂದು ಪೂರ್ವಯೋಜಿತ ಕೃತ್ಯ ಎಂದು ಕಂಡುಬರುತ್ತದೆ. ಇದರ ಹಿಂದೆ ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಇದೆ. ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದೆ.