ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿತನಗರ ಮಹಾಗಣಪತಿ ದೇವಾಸ್ಥಾನದ ಪ್ರತಿಷ್ಠಾ ಮಹೋತ್ಸವ ಇಂದು

Published 28 ಮೇ 2024, 14:40 IST
Last Updated 28 ಮೇ 2024, 14:40 IST
ಅಕ್ಷರ ಗಾತ್ರ

ಕಾರ್ಕಳ: ಇಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ವಠಾರದಲ್ಲಿರುವ ಮಹಾಗಣಪತಿ ದೇವಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ ಇದೇ 29ರಂದು ನಡೆಯಲಿದ್ದು, ಉಡುಪಿಯ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು.

ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಸಂಸ್ಥಾಪಕ ಜಿ. ಶಂಕರ್, ಶಾಸಕ ವಿ. ಸುನಿಲ್ ಕುಮಾರ್‌ ಭಾಗವಹಿಸುವರು. ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಎಸ್‌ಎಸ್ಎಲ್‌ಸಿ, ಪ್ರಥಮ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ವತಿಯಿಂದ ₹68.79 ಲಕ್ಷ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT