ಭಾನುವಾರ, ಜೂನ್ 20, 2021
28 °C

2 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಬ್ರಹ್ಮಾವರ ತಾಲ್ಲೂಕಿನ ವಾರಂಬಳ್ಳಿ ಗ್ರಾಮದ ಧರ್ಮಾವರಂ ಆಡಿಟೋರಿಯಂ ಬಳಿ ಗುರುವಾರ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹೊಸನಗರ ತಾಲ್ಲೂಕಿನ ಆಸಿಫ್ ಬಾಷಾ, ರಿಯಾಜ್ ಬಂಧಿತರು. ಆರೋಪಿಗಳಿಂದ 2 ಕೆ.ಜಿ 38 ಗ್ರಾಂ ಗಾಂಜಾ, 2 ಮೊಬೈಲ್‌, ಒಂದು ಕಾರು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತಿನ ಮೌಲ್ಯ ₹ 3,13,500 ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸೆನ್ ಅಪರಾಧ ಠಾಣೆಯ ಪಿಎಸ್‌ಐ ರಾಮಚಂದ್ರ ನಾಯಕ್, ಪಿಎಸ್‌ಐ ಲಕ್ಷ್ಮಣ, ನಾರಾಯಣ, ಎಎಸ್‌ಐ ಕೇಶವ ಗೌಡ,  ಸಿಬ್ಬಂದಿ ಕೃಷ್ಣಪ್ರಸಾದ್, ಪ್ರಸನ್ನ ಸಾಲ್ಯಾನ್, ಶ್ರೀಧರ್, ಪ್ರವೀಣ, ಪ್ರದೀಪ ಶೆಟ್ಟಿ, ಅರುಣ್ ಶೆಟ್ಟಿ, ಚಾಲಕ ನವೀನಚಂದ್ರ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು