ಗುರುವಾರ , ಅಕ್ಟೋಬರ್ 6, 2022
22 °C

ಕಂದಾವರ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂದಾಪುರ: ಸಮೀಪದ ಕಂದಾವರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಈಚೆಗೆ ನಡೆಯಿತು.  ಅಧ್ಯಕ್ಷತೆ ವಹಿಸಿದ್ದ ಎಸ್.ರತ್ನಾಕರ ಅವರು ಸಂಘಕ್ಕೆ ₹ 2,36,176.70 ನಿವ್ವಳ ಲಾಭ ಬಂದಿದೆ ಎಂದರು. ಹಾಲು ಉತ್ಪಾದಕ ಸದಸ್ಯರಿಗೆ ಶೇಕಡಾ 65 ಬೋನಸ್ ಹಾಗೂ ಶೇಕಡಾ 20 ಡಿವಿಡೆಂಡ್ ನೀಡಲಾಗುವುದೆಂದು ತಿಳಿಸಿದರು. ಕಾರ್ಯದರ್ಶಿ ದೇವೇಂದ್ರ ಎನ್.ಉಗ್ರಾಣಿ, ಸಂಘದ ವರದಿ ಮಂಡಿಸಿದರು. ನಿರ್ದೇಶಕ ಎಸ್. ಜನಾರ್ದನ ಸ್ವಾಗತಿಸಿದರು. ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್‍ ಅವರು ಪಶು ಆಹಾರ ಬಳಕೆ, ರಾಸುಗಳ ನಿರ್ವಹಣೆ ಮತ್ತು ಹಸುವಿನ ವಿಮೆ, ಖನಿಜ ಮಿಶ್ರಣ ಬಗ್ಗೆ ಮಾಹಿತಿ ನೀಡಿದರು. ವಿಸ್ತರಣಾಧಿಕಾರಿ ಉಮೇಶ ಕುಂದರ್ ಹಾಲಿನ ಗುಣಮಟ್ಟ, ಶುದ್ಧ ಹಾಲು ಉತ್ಪಾದನೆ ಬಗ್ಗೆ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.