ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಲಸಿಕಾಕರಣದ ಮಾಹಿತಿ ಸಂಗ್ರಹಿಸಲು ನ.22ರಿಂದ ಮನೆ ಮನೆ ಭೇಟಿ

ಕೋವಿಡ್‌ ಲಸಿಕಾಕರಣದ ಮಾಹಿತಿ ಸಂಗ್ರಹ
Last Updated 20 ನವೆಂಬರ್ 2021, 12:54 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ನ.22 ರಿಂದ 30ರವರೆಗೆ ಕೋವಿಡ್–19 ಲಸಿಕಾಕರಣದ ಮಾಹಿತಿ ಸಂಗ್ರಹಿಸಲು ಮನೆ ಮನೆ ಭೇಟಿ (ಹರ್ ಘರ್ ದಸ್ತಕ್) ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಡಿಎಚ್ಒ ಡಾ.ನಾಗಭೂಷಣ ಉಡುಪಿತಿಳಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಪ್ರಕಾರ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ಮಾಡಿ ಮೊದಲ ಹಾಗೂ ಎರಡನೇ ಡೋಸ್‌ ಪಡೆಯದಿರುವ ಮಾಹಿತಿ ಸಂಗ್ರಹಿಸಿ, ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲಿದ್ದು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಪ್ರಥಮ ಮತ್ತು 2ನೇ ಡೋಸ್ ಲಸಿಕಾರಣದಲ್ಲಿ ಜಿಲ್ಲೆ ಶೇ 100ರ ಗುರಿ ಸಾಧಿಸಬೇಕಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕಾ ಕೇಂದ್ರಕ್ಕೆ ಬಂದು ಪ್ರಥಮ ಡೋಸ್ ಲಸಿಕೆ ಪಡೆಯಬೇಕು. ಕೋವಿಶೀಲ್ಡ್ ಮೊದಲ ಡೋಸ್ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಪಡೆಯಬೇಕು.

ಹಾಗೆಯೇ ಕೋವ್ಯಾಕ್ಸಿನ್ ಪ್ರಥಮ ಡೋಸ್ ಪಡೆದು 28 ದಿನ ಮೀರಿದವರು 2ನೇ ಡೋಸ್ ಕೋವ್ಯಾಕ್ಸಿನ್ ಪಡೆಯಬೇಕು. ಕೋವಿಡ್ ಲಸಿಕೆ ಪಡೆಯುವವರಿಗೆ ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಮಾದರಿ ಪರೀಕ್ಷೆ ಮಾಡಲಾಗುವುದಿಲ್ಲ. ಭಯಬೀಳುವ ಅವಶ್ಯಕತೆ ಇಲ್ಲ. ಶೇ 100 ಗುರಿ ಸಾಧನೆಗೆ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕು ಎಂದು ಡಿಎಚ್‌ಒ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ 2021ರ ಜ.16ರಿಂದ ಕೋವಿಡ್-19 ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಯಿತು. ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಮುಂಚೂಣಿ ಕಾರ್ಯಕರ್ತೆಯರಿಗೆ, ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಲಸಿಕೆ ಹಾಕಲಾಗುತ್ತಿದೆ.

18 ವರ್ಷ ಮೇಲ್ಪಟ್ಟ 9,99,000 ಮಂದಿಗೆ ಜಿಲ್ಲೆಯಲ್ಲಿ ಲಸಿಕೆ ಗುರಿ ಇದ್ದು, ಇದುವರೆಗೆ 9,24,639 (ಶೇ 92.56) ಮಂದಿಗೆ ಎರಡನೇ ಡೋಸ್‌ ಹಾಕಲಾಗಿದೆ. 6,11,569 (ಶೇ61.22) ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಡಿಎಚ್‌ಒ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT