ಗುರುವಾರ , ಜನವರಿ 27, 2022
21 °C

ಗಿರೀಶ್ ಕಾಸರವಳ್ಳಿಗೆ ವಿಶ್ವಪ್ರಭಾ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ವಿಶ್ವಪ್ರಭಾ’ ಪುರಸ್ಕಾರಕ್ಕೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ಎಚ್‌.ಪಿ. ರವಿರಾಜ್ ತಿಳಿಸಿದ್ದಾರೆ.

ಜ.31ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 1 ಲಕ್ಷ ಹಾಗೂ ಫಲಕ ಒಳಗೊಂಡಿದೆ. ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ವಿಶ್ವನಾಥ ಶೆಣೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಪ್ರಯೋಜಕತ್ವದಲ್ಲಿ ಪ್ರತಿವರ್ಷ 'ವಿಶ್ವಪ್ರಭಾ ಪುರಸ್ಕಾರ' ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗಿರೀಶ್ ಕಾಸರವಳ್ಳಿ ಸಿನಿಮಾಗಳು ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಕಮಲ', 'ಸ್ವರ್ಣಕಮಲ' ಪ್ರಶಸ್ತಿಯನ್ನು ಪಡೆದಿರುವ ಕಾಸರವಳ್ಳಿ ಸಾಧನೆ ಅಸಾಧರಣ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು