ಸಮಾಜ ಸೇವೆ ಮಣಿಪಾಲ ಸಂಸ್ಥೆಯ ಗುರಿ: ಡಾ.ಎಚ್.ಎಸ್. ಬಲ್ಲಾಳ್

7

ಸಮಾಜ ಸೇವೆ ಮಣಿಪಾಲ ಸಂಸ್ಥೆಯ ಗುರಿ: ಡಾ.ಎಚ್.ಎಸ್. ಬಲ್ಲಾಳ್

Published:
Updated:
Deccan Herald

ಉಡುಪಿ: ಮಣಿಪಾಲ ಆರೋಗ್ಯ ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯ ಉದ್ದೇಶ ಸಮಾಜ ಸೇವೆಯೇ ಹೊರತು ಹಣ ಗಳಿಸುವುದು ಅಲ್ಲ ಎಂದು ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಹೇಳಿದರು.

ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಹಾಗೂ ಉಡುಪಿ ಸವಿತಾ ಸಮಾಜದ ಸಹಯೋಗದಲ್ಲಿ ಅಂಬಲಪಾಡಿಯಲ್ಲಿರುವ ಸವಿತಾ ಸಮಾಜ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ಸುರಕ್ಷಾ ಕಾರ್ಡ್‌ಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಸವಿತಾ ಸಮಾಜದ 150 ಕುಟುಂಬಗಳಿಗೆ ಆರೋಗ್ಯ ಸುರಕ್ಷಾ ಕಾರ್ಡ್‌ಗಳನ್ನು ವಿತರಿಸಲಾಗಿದ್ದು, ಸಮಾಜದ ಮನವಿಯಂತೆ ಮುಂದಿನ ವರ್ಷ 500 ಕುಟುಂಬಗಳಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸುವ ಬಗ್ಗೆ ಪರಿಶೀಲಿಸಲಾಗುವುದು. ಹಿಂದೆ ₹ 30,000 ಇದ್ದ ಉಚಿತ ಚಿಕಿತ್ಸಾ ವೆಚ್ಚದ ಮೊತ್ತವನ್ನು ₹ 50,000ಕ್ಕೆ ಏರಿಕೆ ಮಾಡಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಜನರು ಈ ಕಾರ್ಡ್‌ ಮೂಲಕ ಹೆಚ್ಚಿನ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.

ಆರೋಗ್ಯ ಕಾರ್ಡ್‌ಗಳು ಕೊಡೆಗಳಿದ್ದಂತೆ. ಮಳೆ ಬರುವಾಗ ತೊಯ್ಯದಂತೆ ಕೊಡೆ ಹೇಗೆ ರಕ್ಷಣೆ ನೀಡುವುದೊ, ಹಾಗೆಯೇ ಅನಾರೋಗ್ಯಕ್ಕೆ ಒಳಗಾದಾಗ ಆರೋಗ್ಯ ಕಾರ್ಡ್‌ಗಳು ಆರ್ಥಿಕವಾಗಿ ನಮ್ಮ ರಕ್ಷಣೆ ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾರ್ಡ್ ಹೊಂದುವುದು ಅತ್ಯಂತ ಮುಖ್ಯ ಎಂದರು.

ಉಡುಪಿ ಸವಿತಾ ಸಮಾಜ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನವೀನ ಚಂದ್ರ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಅಧಿಕಾರಿ ಯು.ಸುಧಾಕರ ಸಾಲಿಯಾನ್, ಸವಿತಾ ಸಮಾಜದ ರಾಜ್ಯ ಪ್ರತಿನಿಧಿ ವಿಶ್ವನಾಥ ಭಂಡಾರಿ ನಿಂಜೂರು, ಜಿಲ್ಲಾ ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸತೀಶ್ ಭಂಡಾರಿ ಉಪಸ್ಥಿತರಿದ್ದರು.

ಉಡುಪಿ ಸವಿತಾ ಸಮಾಜ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾಶಿವ ಕುರ್ಕಾಲು ಸ್ವಾಗತಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !