ಉಡುಪಿ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ
ಉಡುಪಿ: ಪ್ರಗತಿ ನಗರ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕಳ್ಳನೊಬ್ಬ ಬೇಬಿಜಾನ್ ಎಂಬುವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾನೆ.
ಬಾಗಲಕೋಟೆ ಮೂಲದ ಬೇಬಿಜಾನ್ ಹೋಟೇಲ್ ಹಾಗೂ ಮನೆಗಳಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದು, ಜುಲೈ 12ರಂದು ಉಡುಪಿ ಸಾಯಿ ಲಾಡ್ಜ್‌ನಲ್ಲಿ ಪಾತ್ರೆ ಸ್ವಚ್ಚಮಾಡಿ ರಾತ್ರಿ 10:45ರ ಸುಮಾರಿಗೆ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಕಡೆಯಿಂದ ಪ್ರಗತಿ ನಗರ ಕಡೆಗೆ ಹೋಗುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಸರ ಕಿತ್ತು ಪರಾರಿಯಾಗಿದ್ದಾನೆ.
18 ಗ್ರಾಂ ಚಿನ್ನದ ಸರ ₹ 65,000 ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.