ಗುರುವಾರ , ಆಗಸ್ಟ್ 18, 2022
25 °C

ಉಡುಪಿ | ಚಿನ್ನಾಭರಣ, ನಗದು ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಬ್ರಿ: ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ₹8 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಹೋದ ಘಟನೆ ಶಿರ್ಲಾಲು ಹಾಡಿಯಂಗಡಿ ಬಳಿ ಶನಿವಾರ ನಡೆದಿದೆ.

ಇಲ್ಲಿನ ನಿವಾಸಿ ಚೆನ್ನಪ್ಪ ಜೂ. 24ಕ್ಕೆ ಮನೆಗೆ ಬೀಗ ಹಾಕಿ ಹೆಂಡತಿಯೊಂದಿಗೆ ಮಾಳದಲ್ಲಿರುವ ಹೆಂಡತಿಯ ಮನೆಗೆ ಹೋಗಿದ್ದರು. ಮರುದಿನ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮನೆ ಎದುರಿನ ಬಾಗಿಲ ಚಿಲಕ ಹಾಗೂ ಮನೆಯ ಒಳಗಿನ ಕೋಣೆಯ ಬಾಗಿಲಿನ ಬೀಗ ಮುರಿದು ಒಳಗೆ ಹೋಗಿ ಕಪಾಟಿನಲ್ಲಿದ್ದ ಕರಿಮಣಿ ಸೇರಿದಂತೆ ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹75,000 ನಗದು ಕಳವು ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.