ಶುಕ್ರವಾರ, ಏಪ್ರಿಲ್ 16, 2021
31 °C

ಜ್ಯೋತಿಷಿ ಸೋಗಿನಲ್ಲಿ ಚಿನ್ನಾಭರಣ ದೋಚಿ ಪರಾರಿ: ₹ 7.36 ಲಕ್ಷ ಚಿನ್ನ ಮಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜ್ಯೋತಿಷ್ಯ ಹೇಳುವುದಾಗಿ ನಂಬಿಸಿದ ವಂಚಕಿಯೊಬ್ಬಳು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾಳೆ. ರಾಜೀವ ನಗರದ ಲಕ್ಷ್ಮೀ ವಂಚನೆಗೆ ಒಳಗಾದವರು.

ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜ್ಯೋತಿಷಿಯ ಸೋಗಿನಲ್ಲಿ ಲಕ್ಷ್ಮೀ ಅವರ ಮನೆಗೆ ಬಂದ ವಂಚಕಿ ಮನೆಗೆ ಯಾರೋ ಮಾಟ ಮಂತ್ರ ಮಾಡಿಸಿದ್ದು, ಕಣ್ಣು ದೃಷ್ಟಿಯಾಗಿದೆ, ಲಕ್ಷ್ಮಿ ಪೂಜೆ ಮಾಡಿಸಿದರೆ ಎಲ್ಲವೂ ಸರಿಹೋಗುತ್ತದೆ ಎಂದು ನಂಬಿಸಿದ್ದಾಳೆ. ಅದರಂತೆ ಮನೆಯಲ್ಲಿದ್ದ ₹ 7.36 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 15,000 ಪಡೆದು ಬಾಕ್ಸ್‌ನಲ್ಲಿ ಹಾಕಿ ಪೂಜೆ ಮಾಡುವ ನಾಟಕವಾಡಿದ್ದಾಳೆ.

ಮನೆಯವರ ಗಮನ ಬೇರೆಡೆ ಸೆಳೆದು ಬಾಕ್ಸ್‌ನಲ್ಲಿದ್ದ ಹಣ ಹಾಗೂ ಚಿನ್ನಾಭರಣವನ್ನು ಲಪಟಾಯಿಸಿ ಖಾಲಿ ಬಾಕ್ಸ್‌ ಕೊಟ್ಟು ಪರಾರಿಯಾಗಿದ್ದಾಳೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಂಚಕಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು