ಉಡುಪಿ: ಕ್ರೀಡಾಕೂಟ ಒತ್ತಡ ನಿವಾರಣೆಗೆ ಸಹಕಾರಿ. ಸರ್ಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡ ಅನುಭವಿಸುತ್ತಾರೆ. ಮಾನಸಿಕ, ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ದಿನನಿತ್ಯ ಕ್ರೀಡೆ, ಯೋಗ ಹಾಗೂ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ಶಾಸಕ ಯಶ್ಪಾಲ್ ಸುವರ್ಣ ಸಲಹೆ ನೀಡಿದರು.

ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ಮನಸ್ಸು ಚೇತೋಹಾರಿಯಾಗಿರುತ್ತದೆ. ಸರ್ಕಾರಿ ನೌಕರರ ಸಂಘವು ಸದಸ್ಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು ಕ್ರೀಡಾ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಸಂಘಟಿಸಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳು ಜೊತೆಯಾಗಿ ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡುವ ಕಾರ್ಯ ಮಾಡಬೇಕು. ಸರ್ಕಾರಿ ನೌಕರರು ಶೃದ್ಧೆ ಮತ್ತು ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡಿದಾಗ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು.

ಕ್ರೀಡಾ ಕಾರ್ಯದರ್ಶಿ ದಿನಕರ್ ನಾಯ್ಕ್ ಹಾಗೂ ದೀಪಾ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತಣ್ಣ, ಜಿಲ್ಲಾ ಖಜಾಂಜಿ ದಯಾನಂದ ಬೆನ್ನೂರು, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ, ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ನಿರೂಪಿಸಿದರು.

ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕರೆ ವಿವಿಧ ಸ್ಫರ್ಧೆಗಳಲ್ಲಿ ಸರ್ಕಾರಿ ನೌಕರರು ಭಾಗಿ

ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಸರ್ಕಾರಿ ನೌಕರರು ಶೇಕಡಾ ನೂರರಷ್ಟು ಕಾರ್ಯದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಾರೆ
ಅಬೀದ್ ಗದ್ಯಾಳ ಹೆಚ್ಚುವರಿ ಜಿಲ್ಲಾಧಿಕಾರಿ