ಬೈಂದೂರು: ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳು ವಿದ್ಯಾರ್ಥಿ ಸಂಖ್ಯೆ, ಗುಣಮಟ್ಟದ ಶಿಕ್ಷಣ, ಫಲಿತಾಂಶಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೆಲವು ಪ್ರಾಮಾಣಿಕ ಶಿಕ್ಷಕರು ಹೋರಾಡುತ್ತಿದ್ದಾರೆ. ಅವರಿಂದಾಗಿಯೇ ಕೆಲವು ಸರ್ಕಾರಿ ಶಾಲೆಗಳು ಉಳಿದಿದ್ದು, ಅವರ ಸೇವೆ, ಕಾರ್ಯ ಶ್ಲಾಘನೀಯ ಎಂದು ಶಾಸಕ ಗುರುರಾಜ ಗಂಟೆಹೊಳೆ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ಶುಕ್ರವಾರ ಸೇಂಟ್ ಥಾಮಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾಥಿಗಳ ಭವಿಷ್ಯ ರೂಪಿಸುವಲ್ಲಿ ಶ್ರಮಿಸಿರುವ ಎಲ್ಲಾ ನಿವೃತ್ತ ಶಿಕ್ಷಕರಿಗಾಗಿ ಸೆ. 21ರಂದು ನಿವೃತ್ತ ಶಿಕ್ಷಕರ ದಿನಾಚರಣೆ ಆಚರಿಸಲಾಗುವುದು ಎಂದು ಹೇಳಿದರು.

ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಬೈಂದೂರು ವಲಯದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ತಹಶೀಲ್ದಾರ್ ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸೇಂಟ್ ಥಾಮಸ್ ಶಾಲೆಯ ಪ್ರಾಂಶುಪಾಲ ಫಿಲಿಪ್ ನೆಲ್ಲಿವಿಲ್ಲಾ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಜಯಾನಂದ ಪಟಗಾರ್, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷೆ ಸಾರಿಕಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಭಡ್ತಿ ಹೊಂದಿದ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೇಶವ ನಾಯಕ್, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ದೇವಾಡಿಗ, ರತ್ತು ಬಾಯಿ ಜನತಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಆನಂದ ಮದ್ದೋಡಿ ಭಾಗವಹಿಸಿದ್ದರು.

ಪ್ರಭಾರ ಸಮನ್ವಯ ಅಧಿಕಾರಿ ಪ್ರದೀಪ್ ಕುಮಾರ್ ಸ್ವಾಗತಿಸಿದರು. ಕೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ. ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ನಾಯಕ್ ವಂದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ದೇವಾಡಿಗ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.