ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಸರ್ಕಾರದ ಸುಪರ್ದಿಗೆ ತಾಯಿ ಮಕ್ಕಳ ಆಸ್ಪತ್ರೆ

Last Updated 5 ಮೇ 2022, 14:19 IST
ಅಕ್ಷರ ಗಾತ್ರ

ಉಡುಪಿ: ರಾಜ್ಯದ ಮೊದಲ ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರ್ಕಾರ ವಶಕ್ಕೆ ತೆಗೆದುಕೊಂಡಿದ್ದು ಅಧಿಕೃತ ಆದೇಶ ಹೊರಡಿಸಿದೆ. ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸರ್ಕಾರ ಆಸ್ಪತ್ರೆಯ ನಿರ್ವಹಣೆಯನ್ನು ಸುಪರ್ದಿಗೆ ತೆಗೆದುಕೊಂಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಉಡುಪಿಯಲ್ಲಿರುವ 4 ಎಕರೆ ಜಮೀನನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಯ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನೂ ಸರ್ಕಾರ ವಹಿಸಿಕೊಂಡಿದೆ.

ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ ₹ 7 ಕೋಟಿ ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಆವರ್ತಕ ವೆಚ್ಚವಾಗಿ ವಾರ್ಷಿಕ ₹ 2.83 ಕೋಟಿ ಸೇರಿ ₹ 9.83 ಕೋಟಿ ಅನುದಾನವನ್ನು ರಾಜ್ಯ ವಲಯದಿಂದ ಭರಿಸಲು ನಿರ್ಧರಿಸಿದೆ. ಜತೆಗೆ, ಆಸ್ಪತ್ರೆಗೆ ಅಗತ್ಯವಾಗಿರುವ ಹುದ್ದೆಗಳನ್ನು ಸರ್ಕಾರದಿಂದಲೇ ಭರ್ತಿ ಮಾಡುವ ಬಗ್ಗೆಯೂ ಉಲ್ಲೇಖಿಸಿದೆ.

200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ 400 ಹಾಸಿಗೆಗಳ ಸೆಂಟರ್ ಆಫ್ ಎಕ್ಸಲೆನ್ಸ್ ಆಸ್ಪತ್ರೆ ಹಾಗೂ ಆರೋಗ್ಯ ಸೌಲಭ್ಯಗಳನ್ನೊಳಗೊಂಡ ಕೇಂದ್ರವನ್ನು ನಿರ್ವಹಿಸಲು ಹಿಂದಿನ ಸರ್ಕಾರ ಬಿ.ಆರ್.ಎಸ್. ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ ಸಂಸ್ಥೆಯೊಂದಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಒಪ್ಪಂದ ಮಾಡಿಕೊಂಡಿತ್ತು.

ನಿರ್ವಹಣೆ ಸಮಸ್ಯೆ ಹಾಗೂ ಸಿಬ್ಬಂದಿಗೆ ವೇತನ ಸಮಸ್ಯೆ ಎದುರಾಗಿದ್ದರಿಂದ ಆಸ್ಪತ್ರೆಯ ನಿರ್ವಹಣೆಯನ್ನು ಸರ್ಕಾರ ಸುಪರ್ದಿಗೆ ಪಡೆಯಬೇಕು ಎಂದುಶಾಸಕ ರಘುಪತಿ ಭಟ್ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಅದರಂತೆ, ಮಾರ್ಚ್‌ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಯ ನಿರ್ವಹಣೆ ವಹಿಸಿಕೊಳ್ಳಲು ಸರ್ಕಾರ ಒಪ್ಪಿಗೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT