ಭಾನುವಾರ, ನವೆಂಬರ್ 27, 2022
26 °C
ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ₹ 2 ಕೋಟಿ ವೆಚ್ಚದ ಕಟ್ಟಡ ಉದ್ಘಾಟಿಸಿದ ಸುನಿಲ್‌ ಕುಮಾರ್

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ನೆರವು: ಸುನಿಲ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿ ಗಳ ಭವಿಷ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪಿಸುತ್ತಿದ್ದು, ಪ್ರಾಥಮಿಕ ಶಿಕ್ಷಣದಿಂದ ಪಿಯುಸಿವರೆಗಿನ ಎಲ್ಲಾ ವಿಭಾಗಗಳು ಒಂದೇ ಸೂರಿನಡಿ ಲಭ್ಯವಾಗಲಿವೆ’ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.

ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳಿಸಿರುವ ನೂತನ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಬಳಿಕ ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲು ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿದೆ. 20 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತಿದ್ದಾರೆ ಎಂದು ಅವರು ತಿಳಿಸಿದರು.

ಹೊಸ ಕಟ್ಟಡಕ್ಕೆ ಅನುದಾನ: ಹಳೆಯ ಕಟ್ಟಡಗಳ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಲು ₹70 ಲಕ್ಷ ಬಿಡುಗಡೆ ಮಾಡಲಾಗಿದೆ. ಮುನಿಯಾಲು ಕ್ರೀಡಾಂಗಣವನ್ನು ಹೆಬ್ರಿ ತಾಲ್ಲೂಕಿನ ಮಾದರಿ ಕ್ರೀಡಾಂಗಣವಾಗಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಗ್ರಾಮಕ್ಕೊಂದು ಮಾದರಿ ಶಾಲೆ: ರಾಜ್ಯ ಸರ್ಕಾರ ಗ್ರಾಮಕ್ಕೊಂದು ಮಾದರಿ ಸಾಲೆ ನಿರ್ಮಿಸಲು ಚಿಂತನೆ ನಡೆಸುತ್ತಿದೆ. ಆ ಮೂಲಕ ಎಲ್ಲ ವಿದ್ಯಾರ್ಥಿಗಳಿಗೆ ಸವಲತ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಖಾಸಗಿ ಶಾಲೆಗಳ ಜೊತೆ ಸರ್ಕಾರಿ ಶಾಲೆಗಳು ಸ್ಪರ್ಧೆ ನಡೆಸಬೇಕಿದೆ ಎಂದರು.

ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು