ಗುರುವಾರ , ಅಕ್ಟೋಬರ್ 6, 2022
23 °C

ಶಿರ್ವ: ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರತನ್ ಕುಮಾರ್ ಶೆಟ್ಟಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರ್ವ: ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ  ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ.

ಕೆ.ಆರ್.ಪಾಟ್ಕರ್ ರಾಜೀನಾಮೆ ಯಿಂದ ತೆರವಾಗಿದ್ದ ಸ್ಥಾನಕ್ಕೆ ರತನ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಸ್ಪರ್ಧಿಸಿದ್ದರು. ಕಾಂಗ್ರೆಸ್ ಬೆಂಬಲಿತ 19 ಮಂದಿ ಹಾಗೂ ಬಿಜೆಪಿ ಬೆಂಬಲಿತ 15 ಸದಸ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.  ರತನ್ ಕುಮಾರ್ ಶೆಟ್ಟಿ ಕಾಂಗ್ರೆಸ್‌ ಬೆಂಬಲಿತರ 19 ಮತ ಹಾಗೂ ಒಬ್ಬರು ಬಿಜೆಪಿ ಬೆಂಬಲಿತರ ಮತ ಸೇರಿ ಒಟ್ಟು 20 ಮತ ಪಡೆದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ 14 ಮತ ಪಡೆದರು. ರತನ್ ಕುಮಾರ್ ಶೆಟ್ಟಿ ಮೂರು ಬಾರಿ ಶಿರ್ವ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಎರಡು ಬಾರಿ ಪದವು ವಾರ್ಡ್ ಸದಸ್ಯರಾಗಿದ್ದರು. ಪ್ರಸ್ತುತ ಕುಡ್ತ ಮಜಲು ವಾರ್ಡ್ ಸದಸ್ಯರು. ಪದವು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು