ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಜರಾತ್ ಮಾದರಿ ಮರಳು ನೀತಿ ಜಾರಿ ಅಗತ್ಯ’

ಮರಳು ಸಮಸ್ಯೆ ಪರಿಹಾರಕ್ಕೆ ಗುಜರಾತ್‌ಗೆ ತೆರಳಿದ ಶಾಸಕರ ನಿಯೋಗ
Last Updated 14 ಅಕ್ಟೋಬರ್ 2019, 16:57 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ಶಾಸಕ ಕೆ.ರಘುಪತಿ ಭಟ್ ಹಾಗೂ ವಿಧಾನಸಭೆಯ ಮುಖ್ಯ ಸಚೇತಕರಾದ ವಿ.ಸುನೀಲ್ ಕುಮಾರ್ ನೇತೃತ್ವದ ನಿಯೋಗವು ಸೋಮವಾರ ಗುಜರಾತ್‌ಗೆ ತೆರಳಿದ್ದು, ಅಲ್ಲಿನ ಮರಳು ತೆಗೆಯುವ ಪ್ರಕ್ರಿಯೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಿತು.

ಅಹಮದಾಬಾದ್‌ನಲ್ಲಿ ಸಭೆ ನಡೆಸಿದ ಶಾಸಕರ ನಿಯೋಗ ನಾನ್ ಸಿ.ಆರ್.ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಕಾಶದ ಬಗ್ಗೆ ಚರ್ಚೆ ನಡೆಸಿದರು. ಗುಜರಾತಿನ ಗಣಿ ಇಲಾಖೆ ಆಯುಕ್ತರಾದ ಅರುಣ್ ಕುಮಾರ್ ಸೋಲಂಕಿ ಹಾಗೂ ಇತರೆ ಅಧಿಕಾರಿಗಳ ಜತೆ ಚರ್ಚಿಸಿದರು.

ನಾನ್ ಸಿ.ಆರ್.ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಗುಜರಾತ್‌ ರಾಜ್ಯದಲ್ಲಿ ಸಾಕಷ್ಟು ಅವಕಾಶಗಳು ಇವೆ. ಅಲ್ಲಿನ ನಿಯಮ, ರೀತಿ ನೀತಿಗಳ ಬಗ್ಗೆ ಅಧ್ಯಯನ ನಡೆಸಿ ವಿಸ್ತೃತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದು.

ಗುಜರಾತ್ ರಾಜ್ಯದಲ್ಲಿರುವ ಮರಳು ನೀತಿಯನ್ನು ಕರ್ನಾಟಕದಲ್ಲಿ ಅಳವಡಿಸುವ ಮೂಲಕ ಮರಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಶಾಸಕರು ತಿಳಿಸಿದ್ದಾರೆ.

ನಿಯೋಗದಲ್ಲಿ ರಾಜ್ಯದ ಹಿರಿಯ ಅಧಿಕಾರಿಗಳಾದ ಶಿವಶಂಕರ್ ರೆಡ್ಡಿ, ರಾಮ್ ಜೀ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT