ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಜರಾತ್ ಫಲಿತಾಂಶ: ಕರ್ನಾಟಕ ಚುನಾವಣೆ ದಿಕ್ಸೂಚಿ’

ಗುಜರಾತ್‌ನಲ್ಲಿ ಅರಳಿದ ಕಮಲ: ಬಿಜೆಪಿ ಸಂಭ್ರಮಾಚರಣೆ
Last Updated 8 ಡಿಸೆಂಬರ್ 2022, 16:26 IST
ಅಕ್ಷರ ಗಾತ್ರ

ಉಡುಪಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸಿರುವುದು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.

ಗುಜರಾತ್‌ನಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಬಿಜೆಪಿ ಕಚೇರಿ ಎದುರು ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.

ಗುಜರಾತ್ ಹಾಗೂ ಕರ್ನಾಟಕ ಅಭಿವೃದ್ಧಿ, ಹಿಂದುತ್ವ ಹಾಗೂ ಇತರ ವಿಚಾರಗಳಲ್ಲಿ ಸಾಮ್ಯತೆ ಹೊಂದಿವೆ. ಗುಜರಾತ್‌ನ ಜನಾಭಿಪ್ರಾಯದಂತೆ ಕರ್ನಾಟಕದಲ್ಲೂ ಬಿಜೆಪಿ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸಲಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ 150ಕ್ಕೂ ಮಿಕ್ಕಿ ಸ್ಥಾನಗಳನ್ನು ಗೆಲ್ಲುವ ಗುರಿಯೆಡೆಗೆ ತಯಾರಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಗೂ ಅಭಿವೃದ್ಧಿ ಪರ ಆಡಳಿತದ ಪ್ರತಿಫಲ, ಗುಜರಾತ್ ಚುನಾವಣಾ ಫಲಿತಾಂಶವು ಕರ್ನಾಟಕದಲ್ಲಿ ಗುರಿ ತಲುಪಲು ಪ್ರೇರಣೆ ನೀಡಲಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಂ.ಸುವರ್ಣ ಮಾತನಾಡಿ ಬಿಜೆಪಿ ಗುಜರಾತ್ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ಮಾಡಿದೆ. ಪ್ರಧಾನಿ ಮೋದಿ ಹಾಕಿಕೊಟ್ಟ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ತತ್ವದ ಚಿಂತನೆಗಳು ಸಾಕಾರಗೊಂಡಿದ್ದರ ಫಲ ಫಲಿತಾಂಶದಲ್ಲಿ ಪ್ರಕಟವಾಗಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ.ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಮುಖರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಚಂದ್ರಶೇಖರ ಪ್ರಭು, ರೋಷನ್ ಶೆಟ್ಟಿ, ದಿನಕರ ಪೂಜಾರಿ, ಸಂತೋಷ್ ಆಚಾರ್ಯ, ಗುರುಪ್ರಸಾದ್, ಪ್ರಶಾಂತ್ ಭಟ್ ಪೆರಂಪಳ್ಳಿ, ರಾಧಾಕೃಷ್ಣ ಶೆಟ್ಟಿ, ರಾಘವೇಂದ್ರ ಭಟ್, ಪ್ರಣವ್, ಗಗನ್, ಶ್ರೀವಾತ್ಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT