ಸೋಮವಾರ, ಸೆಪ್ಟೆಂಬರ್ 26, 2022
22 °C

ಕೋಟದಲ್ಲಿ ಗುರುವಂದನೆಯ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಟ: ಶಿಕ್ಷಕರಿಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಇದೆ ಎಂದು ಬ್ರಹ್ಮಾವರ ಎಸ್.ಎಂ.ಎಸ್ ಶಾಲೆಯ ಪ್ರಾಂಶುಪಾಲೆ ಅಭಿಲಾಷ ಹೇಳಿದರು.

ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಕೋಟ ವಿದ್ಯಾಸಂಘ ಮತ್ತು ವಿವೇಕ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಗುರುವಂದನೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಕೋಟ ವಿದ್ಯಾಸಂಘದ ಕೋಶಾಧಿ ಕಾರಿ ವಲೇರಿಯನ್ ಮೆನೇಜಸ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ.ನಾಯ್ಕ, ಕೋಟ ವಿದ್ಯಾ ಸಂಘದ ಅಧ್ಯಕ್ಷ ಪಿ.ಪ್ರಭಾಕರ ಮಯ್ಯ, ಕಾರ್ಯದರ್ಶಿ ಎಂ.ರಾಮದೇವ ಐತಾಳ, ಮುಖ್ಯ ಶಿಕ್ಷಕ ಭಾಸ್ಕರ ಆಚಾರ್ಯ, ವೆಂಕಟೇಶ ಉಡುಪ ಇದ್ದರು.

ಜಲಜಾಕ್ಷಿ ಶ್ಯಾನುಭಾಗ್, ಉದಯಕುಮಾರ್ ಮಯ್ಯ, ಕೃಷ್ಣ ಆಚಾರ್, ಸುಧಾಕರ ಬಿ,  ಕೃಷ್ಣಮೂರ್ತಿ ಮಯ್ಯ, ಐರಿನ್‌ ಡಿ ಸೋಜಾ, ಸುಬ್ರಹ್ಮಣ್ಯ ವಾಕುಡ, ಜಲಜಾ, ಅಹಲ್ಯಾ ಅವರನ್ನು ಸನ್ಮಾನಿಸಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು