ಮಂಗಳವಾರ, ಸೆಪ್ಟೆಂಬರ್ 21, 2021
29 °C

ಹಾಲಾಡಿಗೆ ಸಚಿವ ಸ್ಥಾನ ಕೊಡಿ: ಸುಶಾಂತ್ ಅಚ್ಲಾಡಿ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಹಿರಿಯ ಹಾಗೂ ಪ್ರಾಮಾಣಿಕ ರಾಜಕಾರಣಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಅಭಿಮಾನಿ ಸುಶಾಂತ್ ಅಚ್ಲಾಡಿ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1999ರಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ್ದಾರೆ. ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಹಗರಣಗಳಲ್ಲಿ ಭಾಗಿಯಾಗಿಲ್ಲ.  ಯಾವುದೇ ಕಪ್ಪುಚುಕ್ಕೆ ಇಲ್ಲದೆ ಜನಸೇವೆ ಮಾಡುತ್ತಿದ್ದಾರೆ ಎಂದರು.

ಪ್ರತೀ ವಿಧಾನಸಭಾ ಚುನಾವಣೆಯಲ್ಲೂ ಕುಂದಾಪುರ ಕ್ಷೇತ್ರದಲ್ಲಿ ಗರಿಷ್ಠ ಮತಗಳ ಅಂತರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಗೆಲ್ಲುತ್ತಾ ಬಂದಿದ್ದಾರೆ. ಹಿಂದೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಮಾನಿಸಿದ ಬಿಜೆಪಿ ಈಗ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಚುನಾವಣೆಯಲ್ಲಿ ಹಾಲಾಡಿ ಸ್ಪರ್ಧೆ ಮಾಡುವುದು ಖಾತ್ರಿ ಇಲ್ಲವಾಗಿದ್ದು, ಅವರು ಒಮ್ಮೆಯಾದರೂ ಸಚಿವರಾಗಬೇಕು ಎಂಬುದು ಅಭಿಮಾನಿಗಳ ಆಸೆ. ಸಚಿವ ಸ್ಥಾನಕ್ಕೆ ಆಗ್ರಹಿಸಿ ಈಗಾಗಲೇ ಜಾಲತಾಣಗಳಲ್ಲಿ ಅಭಿಯಾನ ಆರಂಭಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳಾದ ಯೋಗೀಶ್‌, ತೀರ್ಥನ್ ದೇವಾಡಿಗ ವಡ್ಡರ್ಸೆ, ಕೀರ್ತೀಶ್ ಪೂಜಾರಿ ಕೋಟ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು