ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಂದಾಪುರ | ಬೈಕ್ ಡಿಕ್ಕಿ: ಯುವಕ ಸಾವು, ಇಬ್ಬರು ಗಂಭೀರ

Published : 29 ಸೆಪ್ಟೆಂಬರ್ 2024, 14:22 IST
Last Updated : 29 ಸೆಪ್ಟೆಂಬರ್ 2024, 14:22 IST
ಫಾಲೋ ಮಾಡಿ
Comments

ಕುಂದಾಪುರ: ನಗರದ ಹೊರವಲಯದ ಹಂಗಳೂರು ಎಂಬಲ್ಲಿ ಶನಿವಾರ ತಡರಾತ್ರಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ  ಯುವಕನೋರ್ವ ಮೃತಪಟ್ಟಿದ್ದಾರೆ.

ಮೃತಪಟ್ಟ ಯುವಕನನ್ನು ಪುರಸಭೆಯ ಚರ್ಚ್ ರಸ್ತೆ ಸಮೀಪದ ಬರೆಕಟ್ಟು ಬಾಳೆಹಿತ್ಲು ನಿವಾಸಿ ಪೈಂಟರ್‌ ವೆಂಕಟೇಶ್‌ ಪುತ್ರ ಶಶಾಂಕ್‌ ಮೊಗವೀರ (22) ಎಂದು ಗುರುತಿಸಲಾಗಿದೆ. ಹಂಗಳೂರಿನ ನಗು ಪ್ಯಾಲೇಸ್‌ ಎದುರಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್‌ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಬೆಂಗಳೂರು ಮೂಲದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ಶನಿವಾರ ರಾತ್ರಿ ಹಂಗಳೂರಿನ ರಿಲಯನ್ಸ್‌ ಪೆಟ್ರೋಲ್‌ ಬಂಕ್‌ನಲ್ಲಿ ಪೆಟ್ರೋಲ್‌ ತುಂಬಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದರು. ವಿರುದ್ಧ ದಿಕ್ಕಿನಿಂದ ಬಂದ ರೋಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್‌ ಡಿಕ್ಕಿಯಾಗಿದೆ.

ಗಂಭೀರ ಗಾಯಗೊಂಡಿದ್ದ ಶಶಾಂಕ್, ಬುಲೆಟ್ ಸವಾರ ಹಾಸನ ಮೂಲದ ಪುನೀತ್ (24), ಆತನ ತಾಯಿ ಪದ್ಮ ಅವರನ್ನು ಮಣಿಪಾಲದ ಕೆೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಶಶಾಂಕ್ ಕೊನೆಯುಸಿರೆಳೆದಿದ್ದಾರೆ. ಪುನೀತ್ ಸ್ಥಿತಿ ಗಂಭೀರವಾಗಿದೆ. ಶಶಾಂಕ್‌ನೊಂದಿಗೆ ಪ್ರಯಾಣಿಸುತ್ತಿದ್ದ ಸಹ‌ ಸವಾರನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಆತ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕಂಡ್ಲೂರಿನಲ್ಲಿ ಬೇಕರಿ ಹೊಂದಿದ್ದ ಪುನೀತ್ ತಾಯಿಯನ್ನು ಬಿಡಲೆಂದು ಕೋಟೇಶ್ವರ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT