‘ಅಳಿಲುಸೇವೆಗೆ ಸಂದ ಪ್ರಶಸ್ತಿ’

ಉಡುಪಿ: ಯಕ್ಷಗಾನ ಕಲೆಗೆ ಸಲ್ಲಿಸಿರುವ ಅಳಿಲುಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸಂತಸವಾಗಿದೆ. ಕೊರೊನಾದಿಂದ ಯಕ್ಷಗಾನ ಮೇಳಗಳು ನಡೆಯುತ್ತಿಲ್ಲ. ಯಕ್ಷಗಾನ ಕಲೆ ನಂಬಿಕೊಂಡು ಜೀವನ ಮಾಡುತ್ತಿರುವ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಸರ್ಕಾರ, ಅಕಾಡೆಮಿ ಹಾಗೂ ದಾನಿಗಳು ನಿಲ್ಲಬೇಕು. ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಯುವಜನತೆ ಈ ಕ್ಷೇತ್ರದಲ್ಲಿ ಅಧ್ಯಯನ ಮಾಡಬೇಕು ಎಂದು ಯಕ್ಷಗಾನ ಕವಿ, ಅರ್ಥಧಾರಿ ಅಂಬಾತನಯ ಮುದ್ರಾಡಿ ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.