ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ರಂದು ತಾಯ್ನಾಡಿಗೆ ಮರಳಿದ್ದಾರೆ ಹರೀಶ್ ಬಂಗೇರ

Last Updated 14 ಆಗಸ್ಟ್ 2021, 16:14 IST
ಅಕ್ಷರ ಗಾತ್ರ

ಉಡುಪಿ: ಸೌದಿ ಅರೆಬಿಯಾ ದೊರೆ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಸಂದೇಶ ಹಾಕಿದ ಆರೋಪದ ಮೇಲೆ ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರ ಆರೋಪ ಮುಕ್ತರಾಗಿ ಆ.18ರಂದು ತಾಯ್ನಾಡಿಗೆ ಮರಳಲಿದ್ದಾರೆ ಎಂಬ ಮಾಹಿತಿ ದೊರೆತಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಬೇಕಾದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಆ.17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾಗೆ ಹೊರಟು, ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂಬ ಮಾಹಿತಿ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಬಂದಿದೆ ಸಚಿವರು ತಿಳಿಸಿದ್ದಾರೆ.

ಏನಿದು ಪ್ರಕರಣ?:

ಕುಂದಾಪುರ ತಾಲ್ಲೂಕಿನ ಬೀಜಾಡಿ ನಿವಾಸಿ ಹರೀಶ್‌ ಬಂಗೇರ ಸೌದಿಯಲ್ಲಿ ಉದ್ಯೋಗದಲ್ಲಿದ್ದು, 2019ರ ಡಿಸೆಂಬರ್‌ನಲ್ಲಿ ಕಿಡಿಗೇಡಿಗಳು ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದರು. ಈ ಸಂಬಂಧ ಸೌದಿ ಪೊಲೀಸರು ಬಂಗೇರ ಅವರನ್ನು ಬಂಧಿಸಿದ್ದರು.

ನಕಲಿ ಖಾತೆ ಸೃಷ್ಟಿಸಿರುವ ಬಗ್ಗೆ ಬಂಗೇರ ಅವರ ಪತ್ನಿ ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂಡುಬಿದಿರೆಯ ಅಬ್ದುಲ್‌ ಹುಯೇಸ್‌ ಹಾಗೂ ತುವೇಸ್‌ನನ್ನು ಬಂಧಿಸಿದ್ದರು. ಆರೋಪಿಗಳ ಬಂಧನದ ಹಿನ್ನೆಲೆಯಲ್ಲಿ ಒಂದೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿರುವ ಹರೀಶ್ ಬಂಗೇರ ಕೊನೆಗೂ ಬಿಡುಗಡೆಯಾಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT