ಕುಂದಾಪುರ: ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಬುಧವಾರ ನಡೆದಿದೆ.

ಮೃತ ವ್ಯಕ್ತಿಯನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹಳೆ ಹರಲಿಪುರ ಗ್ರಾಮದ ನಿವಾಸಿ ಕಾಂತರಾಜು (40) ಎಂದು ಗುರುತಿಸಲಾಗಿದೆ. ದೀಟಿಯಲ್ಲಿನ ಕೃಷಿಕರೊಬ್ಬರ ಗದ್ದೆಯನ್ನು ಗೇಣಿ ಪಡೆದುಕೊಂಡಿದ್ದ ಅವರು, ನಾಲ್ಕೈದು ಮಂದಿಯೊಂದಿಗೆ ಕೃಷಿ ಕಾಯಕದಲ್ಲಿ ನಿರತರಾಗಿದ್ದರು. ಮಧ್ಯಾಹ್ನದ ವೇಳೆ ಊಟಕ್ಕೆಂದು ಟ್ರ್ಯಾಕ್ಟರ್ ನಿಲ್ಲಿಸಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಅಸ್ವಸ್ಥರಾಗಿದ್ದರು. ಅವರನ್ನು ಕೂಡಲೇ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.