ಶುಕ್ರವಾರ, ಆಗಸ್ಟ್ 6, 2021
21 °C

ಉಡುಪಿ: ಭಾರಿ ಮಳೆ, ಕೃತಕ ನೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಕಾಪು ತಾಲ್ಲೂಕಿನಲ್ಲಿ ಹಲವು ಜನವಸತಿ ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದೆ.

ಕಾಪು ತಾಲ್ಲೂಕಿನ ಮಜೂರು, ಉಳಿಯಾರು, ಕರಂದಾಡಿ, ಮಲ್ಲಾರಿನಲ್ಲಿ ನೆರೆ ಸೃಷ್ಟಿಯಾಗಿದ್ದು, ಜಲಾವೃತ ಪ್ರದೇಶಗಳಲ್ಲಿ ವಾಸವಿದ್ದವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಅನಾರೋಗ್ಯ ಪೀಡಿತ ಮಹಿಳೆಯೊಬ್ಬರನ್ನು ಸ್ಥಳೀಯರು ಕುರ್ಚಿಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. ಮತ್ತೊಂದೆಡೆ, ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉಡುಪಿ ನಗರ ವ್ಯಾಪ್ತಿಯಲ್ಲೂ ಹಲವು ಬಡಾವಣೆಗಳು ನೀರಿನಿಂದ ಜಲಾವೃತಗೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.