ಶನಿವಾರ, ಆಗಸ್ಟ್ 13, 2022
27 °C

ಹೆಬ್ರಿಯಲ್ಲಿ 26.5 ಸೆಂ.ಮೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಬುಧವಾರವೂ ಮಳೆ ಮುಂದುವರಿದಿದ್ದು, ಗಾಳಿ ಮಳೆಗೆ ಕಾರ್ಕಳ ತಾಲ್ಲೂಕಿನ ಮುಂಡ್ಕೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.

ಹೆಬ್ರಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 26.5 ಸೆಂ.ಮೀ ಮಳೆ ಬಿದ್ದಿದೆ. ಶಿವಪುರದಲ್ಲಿ 18.9 ಸೆಂ.ಮೀ, ವರಂಗದಲ್ಲಿ 18.3. ಸೆಂ.ಮೀ ಮಳೆಯಾಗಿದೆ.

ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, 3.5 ಮೀಟರ್‌ವರೆಗೂ ದೈತ್ಯ ಅಲೆಗಳು ಏಳುವ ಸಂಭವವಿದ್ದು ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 30 ಹಾಗೂ ಜುಲೈ 1ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದ್ದು, 20.4 ಸೆಂ.ಮೀ.ವರೆಗೂ ಮಳೆಯಾಗುವ ಸಾದ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.