ಮಂಗಳವಾರ, ಅಕ್ಟೋಬರ್ 27, 2020
26 °C

ಉಡುಪಿ: ಬಿರುಸಾದ ಮಳೆ, ಕೃಷಿ ಭೂಮಿ ಜಲಾವೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆಯಾಗಿದೆ. ಬೆಳಗಿನ ಜಾವ ಕೆಲಹೊತ್ತು ಬಿರುಸಾಗಿ ಸುರಿದ ಮಳೆ ಬಳಿಕ ನಿರಂತರ ಬೀಳುತ್ತಿತ್ತು.

ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಆಗಾಗ ಜೋರಾಗಿ ಗಾಳಿ ಬೀಸುತ್ತಿತ್ತು. ಕುಂದಾಪುರ ತಾಲ್ಲೂಕಿನ ಹಲವೆಡೆ ಬಿರುಸಿನ ಮಳೆಯಾಗಿದೆ. ಮಳೆಗೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಸಮುದ್ರದಲ್ಲಿ ಅಲೆಗಳ ಉಬ್ಬರವೂ ಹೆಚ್ಚಾಗಿದೆ. ಇನ್ನೆರಡು ದಿನ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ ನಗರದ ಹಲವೆಡೆ ಹಲವು ತಾಸು ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು