ಉಡುಪಿ: ಜಿಲ್ಲೆಯಲ್ಲಿ ಬೀಚ್ ಮತ್ತು ದೇಗುಲ ಪ್ರವಾಸೋದ್ಯಮವು ಪ್ರಮುಖವಾಗಿದ್ದು, ಈ ವರ್ಷ ಅಕ್ಟೋಬರ್ ತಿಂಗಳವರೆಗೂ ನಿರಂತರವಾಗಿ ಸುರಿದ ಮಳೆಯು ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಬೀಚ್ಗಳಲ್ಲಿ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ತಡೆಬೇಲಿ ಹಾಕಲಾಗುತ್ತದೆ. ಮಲ್ಪೆ ಬೀಚ್ ಸೇರಿದಂತೆ ಜಿಲ್ಲೆಯ ಬಹುತೇಕ ಬೀಚ್ಗಳಲ್ಲೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತದೆ.

ಈ ಬಾರಿ ಮಳೆ ನಿರಂತರವಾಗಿ ಸುರಿದ ಕಾರಣ ಹಾಗೂ ಕಡಲು ಪ್ರಕ್ಷುಬ್ಧವಾಗಿದ್ದ ಕಾರಣ ಬೀಚ್ಗಳಿಗೆ ಅಳವಡಿಸಿದ್ದ ತಡೆಬೇಲಿಗಳನ್ನು ತಡವಾಗಿ ತೆರವುಗೊಳಿಸಲಾಗಿತ್ತು.

ಪ್ರಸಿದ್ಧ ಪ್ರವಾಸಿ ತಾಣವಾದ ಸೇಂಟ್ ಮೇರಿಸ್ ದ್ವೀಪಕ್ಕೂ ಬೋಟ್ ಸೇವೆ ಅಲ್ಪ ತಡವಾಗಿಯೇ ಆರಂಭವಾಗಿತ್ತು. ಇದರಿಂದಾಗಿ ಈ ವರ್ಷ ಜಿಲ್ಲೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಅಲ್ಪ ಕುಸಿದಿದೆ. ಕಳೆದ ವರ್ಷ ಜಿಲ್ಲೆಗೆ ಭೇಟಿ ನೀಡಿದ್ದ ಪ್ರವಾಸಿಗರ ಸಂಖ್ಯೆಗಿಂತ ಈ ವರ್ಷ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.

ಕಳೆದ ಐದು ವರ್ಷಗಳಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಬಂದಿದೆ. ಆದರೆ, ಈ ಬಾರಿ ಮಾತ್ರ ಕಳೆದ ವರ್ಷಕ್ಕಿಂತ ಅಲ್ಪ ಕುಸಿದಿದೆ.

ಜಿಲ್ಲೆಯ ಪ್ರವಾಸೋದ್ಯಮವು ಮುಖ್ಯವಾಗಿ ಬೀಚ್ಗಳನ್ನೇ ಆಧರಿಸಿದೆ. ಮಳೆಗಾಲದ ನಾಲ್ಕು ತಿಂಗಳು ಬೀಚ್ಗಳಲ್ಲಿ ಎಲ್ಲಾ ಚಟುವಟಿಕೆಗಳು ಸ್ತಬ್ಧವಾಗುತ್ತವೆ. ಈ ಬಾರಿ ಅಕ್ಟೋಬರ್ ತಿಂಗಳವರೆಗೂ ಮಳೆ ಮುಂದುವರಿದ ಕಾರಣ ಬೀಚ್ಗಳಲ್ಲಿ ತಡೆಬೇಲಿ ತೆರವಾಗದೆ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿತ್ತು.

ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಿಂದ ಬೀಚ್ಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತದೆ. ಈ ಬಾರಿ ಅಲ್ಪ ವಿಳಂಬವಾಗಿಯೇ ಪ್ರವಾಸಿಗರು ಬೀಚ್ಗಳತ್ತ ಮುಖ ಮಾಡಿದ್ದರು.

ಮಲ್ಪೆ ಸೇರಿದಂತೆ ವಿವಿಧ ಬೀಚ್ಗಳಲ್ಲಿ ಪ್ರತಿವರ್ಷವೂ ಅಕ್ಟೋಬರ್ ತಿಂಗಳ ನಂತರ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ಗರಿಗೆದರುತ್ತವೆ. ಆದರೆ ಈ ಬಾರಿ ತಡವಾಗಿಯೇ ಆರಂಭವಾಗಿತ್ತು.

ಮಳೆ ಕಡಿಮೆಯಾದರೂ ಪದೇ ಪದೇ ಕಾಣಿಸಿಕೊಂಡ ತೂಫಾನ್ನ ಪರಿಣಾಮವಾಗಿ ಕಡಲು ಪ್ರಕ್ಷುಬ್ಧವಾಗಿದ್ದ ಕಾರಣ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ತಡವಾಗಿ ಆರಂಭವಾಗಿತ್ತು ಎಂದು ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿದವು.

‘ಅಕ್ಟೋಬರ್ ನಂತರ ಪ್ರವಾಸಿಗರ ಆಗಮನ’ ‘ಈ ಬಾರಿ ಮಳೆ ಜಾಸ್ತಿಯಾಗಿದ್ದರಿಂದ ಅಕ್ಟೋಬರ್ವರೆಗೆ ಕಡಿಮೆ ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದರು. ಅಕ್ಟೋಬರ್ ನಂತರ ಪ್ರವಾಸಿಗರ ಸಂಖ್ಯೆ ಜಾಸ್ತಿಯಾಗಿತ್ತು’ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ. ತಿಳಿಸಿದರು. ‘ಪ್ರತಿವರ್ಷ ಬೀಚ್ಗಳಲ್ಲಿ ಅಕ್ಟೋಬರ್ 15ರಿಂದ ವಾಟರ್ ಸ್ಪೋರ್ಟ್ಸ್ ಶುರುವಾಗುತ್ತಿತ್ತು. ಅದು ಈ ಬಾರಿ ನವೆಂಬರ್ 15ರ ನಂತರ ಆರಂಭವಾಗಿತ್ತು. ಕ್ರಿಸ್ಮಸ್ ಮತ್ತು ವರ್ಷಾಂತ್ಯದ ಕಾರಣ ಈಗ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಫೆಬ್ರುವರಿವರೆಗೂ ಪ್ರವಾಸಿಗರು ಬರಲಿದ್ದಾರೆ. ಅನಂತರ ಮಕ್ಕಳ ಪರೀಕ್ಷೆ ಆರಂಭವಾಗುವುದರಿಂದ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗುತ್ತದೆ’ ಎಂದು ಅವರು ತಿಳಿಸಿದರು.

ಡಿಸೆಂಬರ್ನಲ್ಲಿ ಪ್ರವಾಸಿಗರ ದಂಡು ಈ ವರ್ಷ ಡಿಸೆಂಬರ್ ತಿಂಗಳಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಉಡುಪಿಯ ಕೃಷ್ಣ ಮಠ ಸೇರಿದಂತೆ ಜಿಲ್ಲೆಯ ವಿವಿಧ ದೇವಾಲಯಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದು ದೇವಾಲಯಕ್ಕೆ ಬರುವ ಪ್ರವಾಸಿಗರು ಮಲ್ಪೆ ಬೀಚ್ಗೂ ತೆರಳುತ್ತಿದ್ದಾರೆ. ಇದರಿಂದ ನಗರದಲ್ಲಿ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ. ವಿವಿಧ ಜಿಲ್ಲೆಗಳಿಂದ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಬರುವವರು ಕೂಡ ಮಲ್ಪೆ ಬೀಚ್ಗೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದಲ್ಲೂ ಡಿಸೆಂಬರ್ ತಿಂಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.