ಬುಧವಾರ, ಸೆಪ್ಟೆಂಬರ್ 22, 2021
21 °C

ಜನಾಶೀರ್ವಾದ ಯಾತ್ರೆ: ಹೆಬ್ರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಬುಧವಾರ ರಾತ್ರಿ ಹೆಬ್ರಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳ ಗೌರವ ಸ್ವೀಕರಿಸಿ ಮಾತನಾಡಿದ ಅವರು, ‘ರೈತರ ಸೇವೆ ಮಾಡಲು ಪ್ರಧಾನಿ ಕೃಷಿ ಖಾತೆ ನೀಡಿದ್ದಾರೆ. ಕೇಂದ್ರ ಸರ್ಕಾರ ₹ 1.50 ಲಕ್ಷ ಕೋಟಿ ಅನುದಾನವನ್ನು ರೈತರ ಕಲ್ಯಾಣಕ್ಕೆ ನೀಡಿದೆ. ಹಣ್ಣು ತರಕಾರಿ ಸಹಿತ ಆಹಾರ ಉತ್ಪನ್ನಗಳ ರಫ್ತಿನಲ್ಲಿ ಭಾರತದ ವಿಶ್ವದಲ್ಲಿ 9ನೇ ಸ್ಥಾನದಲ್ಲಿದೆ’ ಎಂದರು.

ಕೃಷಿ ಅಭಿವೃದ್ಧಿ, ಉತ್ಪನ್ನಗಳ ರಪ್ತು, ರೈತರ ಉತ್ಪಾದನಾ ಘಟಕಗಳನ್ನು ಹೆಚ್ಚು ಸ್ಥಾಪನೆ ಮಾಡಲಾಗುತ್ತದೆ. ಜಿಲ್ಲೆಯ ರೈತರ ಸಮಸ್ಯೆಯ ಜೊತೆಗೆ ಗೇರು, ಕಾಫಿ, ಅಡಿಕೆ ಬೆಳೆಗಾರರ ಸಮಸ್ಯೆ ಇತ್ಯರ್ಥ ಮಾಡಲಾಗುವುದು. ರಾಜ್ಯದ ಎಲ್ಲ ಕೃಷಿಕರ ಸಮಸ್ಯೆಯನ್ನು ಆದ್ಯತೆಯಲ್ಲಿ ನಿವಾರಣೆ ಮಾಡಲಾಗುವುದು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ, ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಗೌಡ, ಬಿಜೆಪಿ ಉಸ್ತುವಾರಿ ಉದಯ ಕುಮಾರ್ ಶೆಟ್ಟಿ, ಆಹಾರ ನಿಗಮದ ಅಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಪ್ರಮುಖರಾದ ಮುನಿ, ಹೆಬ್ರಿ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಹೆಬ್ರಿ ಬಿಜೆಪಿ ಅಧ್ಯಕ್ಷ ರಮೇಶ ಕುಮಾರ್ ಶಿವಪುರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು