ಹೆಬ್ರಿ: ‘ಸಮಾಜಸೇವಕ ಈಶ್ವರ್ ಮಲ್ಪೆ ಅವರ ತಂಡದಿಂದ ನಿರಂತರವಾಗಿ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದು ಇಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೆರ್ಡೂರು ಸದಾಶಿವ ಸೇರ್ವೇಗಾರ್ ಹೇಳಿದರು.

ಅವರು ಮಂಗಳವಾರ ಇಲ್ಲಿನ ರೋಟರಿ ಸಮುದಾಯ ದಳದ ಕ್ಯಾಂಪಿನಲ್ಲಿ ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ರೋಟರಿ ಸಮುದಾಯ ದಳ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಜೆಸಿಐ, ಹೆಬ್ರಿ ಗ್ರಾಮ ಪಂಚಾಯಿತಿ ಸಹಕಾರದಲ್ಲಿ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಸಮುದಾಯ ದಳದ ಸಹಕಾರದಿಂದ ಹೆಬ್ರಿಯಲ್ಲಿ 2 ವರ್ಷದಿಂದ ಈ ಕಾರ್ಯ ನಡೆಯುತ್ತಿದೆ. ಪಂಚಾಯಿತಿ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

ಟೀಮ್ ಈಶ್ವರ್ ಮಲ್ಪೆ ತಂಡದ ಮ್ಯಾನೇಜರ್ ಲವ ಕುಮಾರ್ ಮಾತನಾಡಿ, ಎಲ್ಲೆಡೆ ಆರೋಗ್ಯ ಕಾಳಜಿಯ ಶಿಬಿರಗಳು ನಡೆಯುತ್ತಿವೆ. ನಮ್ಮ ತಂಡದಿಂದ ಕಿವಿಯ ಬಗ್ಗೆ ಹೆಚ್ಚು ಒತ್ತು ನೀಡಿ ಶಿಬಿರ ನಡೆಸುತ್ತೇವೆ. ಹೆಚ್ಚು ಜನರಿಗೆ ಪ್ರಯೋಜನವಾಗಬೇಕು ಎಂಬುದು ನಮ್ಮ ಆಶಯ ಎಂದರು.

ರೋಟರಿ ಸಮುದಾಯ ದಳದ ಅಧ್ಯಕ್ಷ ರಾಮಕೃಷ್ಣ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಸುಮಲತಾ ಹೆಬ್ಬಾರ್, ಜೆಸಿಐ ಅಧ್ಯಕ್ಷ ಸತೀಶ ಕುಲಾಲ್, ಡಾ. ಅಂಕಿತಾ, ಟೀಮ್ ಈಶ್ವರ್ ಮಲ್ಪೆ ತಂಡದ ಪದಾಧಿಕಾರಿಗಳು, ಪ್ರಮುಖರು ಭಾಗವಹಿದ್ದರು. ಕೃಷ್ಣರಾಜ ಆಚಾರ್ಯ ನಿರೂಪಿಸಿದರು. ನಿತ್ಯಾನಂದ ಭಟ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-28-235269225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.