ಹೆಬ್ರಿ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟು ಸ್ಥಳೀಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದ್ದು, ಇನ್ನೂ ಕೆಲವು ದಿನ ಸಮಸ್ಯೆ ಮುಂದುವರಿದರೆ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಾಲಿಕವಾಗಿ ಬಾಗಿಲು ಹಾಕುವ ಭೀತಿ ಎದುರಾಗಿದೆ.

ಉಡುಪಿ ಜಿಲ್ಲೆಯಲ್ಲಿ 45ಕ್ಕೂ ಹೆಚ್ಚು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ಗಳು, ಸಮಾಜ ಕಲ್ಯಾಣ ಇಲಾಖೆ, ಹಾಗೂ ಐಟಿಡಿಪಿ ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆಗೆ ಎಲ್ಪಿಜಿ ಸಿಲಿಂಡರ್ ಹೆಚ್ಚು ಪ್ರಮಾಣದಲ್ಲಿ ಬೇಕಾಗುತ್ತದೆ. ಪ್ರಸ್ತುತ ಎದುರಾಗಿರುವ ಬಿಕ್ಕಟ್ಟಿನಿಂದ ಗ್ಯಾಸ್ ಬುಕ್ಕಿಂಗ್ ಸಮಸ್ಯೆಯಾಗುತ್ತಿದೆ. ಈ ವಸತಿನಿಲಯಗಳಲ್ಲಿ ಹೆಚ್ಚಿನವರು ಹೊರಜಿಲೆಯ ವಿದ್ಯಾರ್ಥಿಗಳು ಎನ್ನುತ್ತಾರೆ ಹಾಸ್ಟೆಲ್ನ ಪ್ರಮುಖರೊಬ್ಬರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಸದ್ಯದಲ್ಲಿ ಆರಂಭವಾಗಲಿದೆ. ವಸತಿನಿಲಯಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಓದಿನ ಜೊತೆಗೆ ವಾಸ್ತವ್ಯದ ಬಗ್ಗೆ ಚಿಂತೆಯಾಗುತ್ತಿದೆ. ಜಿಲ್ಲೆಯ ವಿವಿಧ ನಿಲಯಗಳಲ್ಲಿ ಉತ್ತರ ಕರ್ನಾಟಕ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ವಿದ್ಯಾರ್ಥಿಗಳು ಇದ್ದಾರೆ. ಪರೀಕ್ಷೆ ಮುಗಿಯುವ ತನಕ ಯಾವುದೇ ಸಮಸ್ಯೆ ಆಗದಿರಲಿ ಎಂಬುದು ನಮ್ಮ ಆಶಯವಾಗಿದೆ ಎನ್ನುತ್ತಾರೆ ಪಾಲಕರೊಬ್ಬರು.

ಎಲ್ಪಿಜಿ ಸಿಲಿಂಡರ್ ಅನ್ನು ಮಿತವ್ಯಯದಲ್ಲಿ ಬಳಸುವಂತೆ ಇಲಾಖೆ ಅಧಿಕಾರಿಗಳು ಎಲ್ಲ ಹಾಸ್ಟೆಲ್ಗಳಿಗೆ ಸೂಚನೆ ನೀಡಿದ್ದಾರೆ. ಹೆಚ್ಚುವರಿ ಸಿಲಿಂಡರ್ ಇರುವ ವಿದ್ಯಾರ್ಥಿ ನಿಲಯಗಳಿಂದ ಪಡೆದು, ಕೊರತೆ ಇರುವ ಕಡೆ ಪೂರೈಕೆ ಮಾಡಿ ಸರಿದೂಗಿಸಲು ಯತ್ನಿಸುತ್ತಿದ್ದಾರೆ ಎಂದು ತಾಲ್ಲೂಕು ಮಟ್ಟದ ಅಧಿಕಾರಿಯೊಬ್ಬರು ತಿಳಿಸಿದರು.

ಎಲ್ಲ ವಿದ್ಯಾರ್ಥಿ ನಿಲಯಗಳಿಗೆ ಕಡ್ಡಾಯವಾಗಿ 25 ದಿನಗಳ ಮೊದಲು ಸಿಲಿಂಡರ್ ಬುಕ್ಕಿಂಗ್ ಮಾಡಲು ತಿಳಿಸಿದ್ದೇವೆ. ನಿಲಯದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ.
ಪ್ರತೀಕ್ ಬಾಯಲ್ ಜಿ.ಪಂ. ಸಿಇಒ

ಸಿಲಿಂಡರ್ ಗ್ಯಾಸ್ ಅನ್ನು ಮಿತವ್ಯಯದಲ್ಲಿ ಬಳಸುವಂತೆ ಎಲ್ಲ ಹಾಸ್ಟೆಲ್ಗಳಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸುತ್ತೇವೆ.
ಹಾಕಪ್ಪ ಲಮಾಣಿ ಬಿಸಿಎಂ ಜಿಲ್ಲಾ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.