ಹೆಬ್ರಿ: ತಾಲ್ಲೂಕಿನ ಚಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡೆಜಡ್ದು ಎಂಬಲ್ಲಿ ಅನೇಕ ವರ್ಷಗಳಿಂದ ಜನರು ಉಪಯೋಗಿಸುತ್ತಿದ್ದ ರಸ್ತೆಯನ್ನು ವ್ಯಕ್ತಿಯೊಬ್ಬರು ಏಕಾಏಕಿಯಾಗಿ ಬಂದ್ ಮಾಡಿದ್ದು, ಕಂದಾಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದ ಘಟನೆ ಸೋಮವಾರ ನಡೆದಿದೆ.

ರಸ್ತೆ ಮುಚ್ಚಿದ್ದರಿಂದ ಸುಮಾರು 40 ಮನೆಗಳಿಗೆ ಸಂಪರ್ಕ ಕಡಿತಗೊಂಡಿತ್ತು. ಕೆಲವರು ಸುತ್ತು ಬಳಸಿ ಬಂದರೆ, ಅನೇಕರಿಗೆ ರಸ್ತೆ ಇಲ್ಲದಂತಾಗಿತ್ತು. ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಯಿತು. ಅತಿ ದೂರದಿಂದ ಹೋಗಬೇಕಾದ ಪರಿಸ್ಥಿತಿ ಉಂಟಾಗಿತ್ತು. ಈ ಪರಿಸರದ ಬಹುತೇಕರು ಕಾರ್ಮಿಕರಾಗಿರುವುದರಿಂದ ಕೆಲಸಕ್ಕೆ ಹೋಗಲು ತೊಂದರೆ ಅನುಭವಿಸಿದರು. ನೀರಿನ ಪೈಪ್ಲೈನ್ಗಳು ರಸ್ತೆ ಬದಿಯಲ್ಲಿ ಹಾದು ಹೋಗಿದ್ದವು. ರಸ್ತೆ ಅಗೆಯುವಾಗ ಪೈಪ್ಲೈನ್ ಒಡೆದು ಹೋಗಿ ಕೃಷಿಗೆ ತೊಂದರೆ ಆಗಿದೆ ಎಂದು ಕೃಷಿಕರು ಬೇಸರ ವ್ಯಕ್ತಪಡಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಎಸ್.ಎ.ಪ್ರಸಾದ್ ನೇತೃತ್ವದ ತಂಡ ರಸ್ತೆಯಲ್ಲಿ ಅಗೆದಿದ್ದ ಗುಂಡಿ ಮುಚ್ಚಲು ಆದೇಶಿಸಿತು. ಕಂದಾಯ ನಿರೀಕ್ಷಕ ಹಿತೇಶ್ ಯು.ಬಿ, ತಾಲ್ಲೂಕು ಸರ್ವೆಯರ್ ರವಿರಾಜ್, ಗ್ರಾಮ ಆಡಳಿತ ಅಧಿಕಾರಿ ನವೀನ್ ಕುಮಾರ್ ಕುಕ್ಕುಜೆ, ಎಎಸ್ಐ ಉಮೇಶ್, ಊರಿನ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.

‘ಹಲವು ವರ್ಷಗಳಿಂದ ಸಾರ್ವಜನಿಕರು ಈ ರಸ್ತೆ ಉಪಯೋಗಿಸುತ್ತಿದ್ದರು. ರಸ್ತೆ ಬಂದ್ ಮಾಡಿರುವ ದೂರು ಬಂದಿತ್ತು. ಪರಿಶೀಲಿಸಿ ಮುಚ್ಚಿದ್ದ ರಸ್ತೆ ತೆರವುಗೊಳಿಸಿ ಸಾರ್ವಜನಿಕರ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ’ ಎಂದು ತಹಶೀಲ್ದಾರ್ ಎಸ್.ಎ. ಪ್ರಸಾದ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-28-1795847749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.