ಹೆಬ್ರಿ: ಹೆಬ್ರಿ ಮಾಂಡಿ ಮೂರ್ಕೈ ಸಂಪರ್ಕಿಸುವ ಮುಖ್ಯ ರಸ್ತೆಗೆ ಡಾಂಬರು ಹಾಕುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಹೆಬ್ರಿ ಕುಚ್ಚೂರು ಭಾಗದ ಗ್ರಾಮಸ್ಥರು ಸೋಮವಾರ ಕಾಮಗಾರಿ ತಡೆದು ಪ್ರತಿಭಟಿಸಿದರು.

ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆದಾರರು ಮೊದಲೇ ತಿಳಿಸಿದಂತೆ ರಸ್ತೆ ವಿಸ್ತರಣೆ ಆಗಬೇಕು. ಇಲ್ಲದಿದ್ದರೆ ಡಾಂಬರು ಹಾಕುವುದು ಬೇಡ ಎಂದು ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಪೂಜಾರಿ ಕುಚ್ಚೂರು ನೇತೃತ್ವದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಹೆಬ್ರಿ ಸಬ್ಇನ್ಸ್ಪೆಕ್ಟರ್ ರವಿ ಬಿಕೆ, ಲೋಕೋಪಯೋಗಿ ಎಂಜಿನಿಯರ್ ತ್ರಿನೇಂದ್ರ, ಗುತ್ತಿಗೆದಾರ ವಾದಿರಾಜ ಶೆಟ್ಟಿ, ಗ್ರಾಮಸ್ಥರ ಮನವೊಲಿಸಿ ಮಳೆಗಾಲದ ನಂತರ, ರಸ್ತೆಗೆ ಮರು ಡಾಂಬರು ಹಾಕಿ ವಿಸ್ತರಣೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ಅರಣ್ಯ ಇಲಾಖೆಯ ಸಮಸ್ಯೆಯಿಂದ ರಸ್ತೆ ವಿಸ್ತರಣೆಗೆ ವಿಳಂಬವಾಗಿದೆ. ಅರಣ್ಯ ಇಲಾಖೆಯ ಎಫ್ಸಿ ಸಿಕ್ಕಿದ ಕೂಡಲೇ ಕಾಮಗಾರಿ ನಡೆಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದರು. ದೇವಳಬೈಲು ಸುಧಾಕರ ಶೆಟ್ಟಿ, ಮಹೇಶ ಶೆಟ್ಟಿ ಕುಚ್ಚೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-1626631584

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.