ಹೆಬ್ರಿ: ‘ಮುದ್ರಾಡಿಯಲ್ಲಿ ಮಂಜುನಾಥ ಪೂಜಾರಿ ಅವರ ನೇತೃತ್ವದಲ್ಲಿ ಶಾರದೋತ್ಸವದ ಮೂಲಕ ಊರು ಸಮೃದ್ಧಿಯಾಗುವ ಕಾರ್ಯಕ್ರಮ ನಡೆದಿದೆ. ಜನಪರ ಕಾಳಜಿಯೊಂದಿಗೆ ಇಲ್ಲಿ ನಿರಂತರವಾದ ಕಾರ್ಯಕ್ರಮಗಳು ನಡೆಯುತ್ತಿರುವುದು ಆದರ್ಶಪ್ರಾಯ’ ಎಂದು ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ ಹೇಳಿದರು.

ಮುದ್ರಾಡಿ ಸಾರ್ವಜನಿಕ ಶಾರದೋತ್ಸವ ಸಮಿತಿ, ಗುರುರಕ್ಷಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುರಕ್ಷಾ ಸೌಹಾರ್ದ ಸಹಕಾರಿ ಸಂಘದ ಆವರಣದಲ್ಲಿ 6ನೇ ವರ್ಷದ ಶಾರದೋತ್ಸವ ಮುದ್ರಾಡಿ ದಸರಾದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಉಪನ್ಯಾಸ ನೀಡಿ, ವಿದ್ಯೆಯಿಂದ ವಿನಯ ಬರುತ್ತದೆ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಅದು ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುತ್ತದೆ. ನಮ್ಮಲ್ಲಿ ಬದ್ಧತೆ ಇದ್ದಾಗ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಹೆತ್ತವರು ಬಾಲ್ಯದಲ್ಲಿಯೇ ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಜೀವನ ಮೌಲ್ಯವಿಲ್ಲದ ಶಿಕ್ಷಣ ಪಡೆಯುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಮುದ್ರಾಡಿ ಶಾರದೋತ್ಸವ ಸಮಿತಿ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಕಾರ್ಯಕ್ರಮಕ್ಕರ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಸಕ ಸುನಿಲ್ ಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಎಸ್ಎಸ್ಎಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ರಸಪ್ರಶ್ನೆ ಸ್ಪರ್ಧೆ, ಅಕ್ಷರಭ್ಯಾಸ, ಅನ್ನ ಸಂತರ್ಪಣೆ, ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶಾರದೋತ್ಸವ ಪುರಸ್ಕಾರ, ಕುಣಿತ ಭಜನೆ, ಶೋಭಾಯಾತ್ರೆ, ಶಾರದಾ ವಿಗ್ರಹದ ಜಲಸ್ತಂಭನ ನಡೆಯಿತು.

ಮುದ್ರಾಡಿ ಶಾರದೋತ್ಸವ ಸಮಿತಿ ಅಧ್ಯಕ್ಷ ಮಂಜುನಾಥ ಪೂಜಾರಿ, ಮುದ್ರಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವಸಂತಿ ಪೂಜಾರಿ, ತಹಶೀಲ್ದಾರ್ ಎಸ್.ಎ. ಪ್ರಸಾದ್, ವಕೀಲ ಎಚ್. ಶೇಖರ್ ಮಡಿವಾಳ, ಉದ್ಯಮಿಗಳಾದ ಯೋಗೀಶ್ ಭಟ್, ಗೋಪಿನಾಥ್ ಭಟ್, ಮಂಜುನಾಥ್, ವರಂಗ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಣ ಆಚಾರ್ಯ, ಮುದ್ರಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಂಜುನಾಥ ಹೆಗ್ಡೆ, ಸಮಾಜ ಸೇವಕ ಗಣಪತಿ ಎಂ, ಉಪಾಧ್ಯಕ್ಷ ಚಂದ್ರಶೇಖರ ಬಾಯರಿ ಕಬ್ಬಿನಾಲೆ, ಕೋಶಾಧಿಕಾರಿ ಚಂದ್ರಶೇಖರ್ ಭಟ್ ಬಲ್ಲಾಡಿ, ಕಾರ್ಯದರ್ಶಿ ವಿಶು ಕುಮಾರ್ ಉಪ್ಪಳ, ಜೊತೆ ಕಾರ್ಯದರ್ಶಿ ಅಣ್ಣಪ್ಪ ಮುದ್ರಾಡಿ, ಪ್ರಕಾಶ್ ಸೇರಿಗಾರ್ ಜರ್ವತ್ತು, ಗೌರವ ಸಲಹೆಗಾರರು, ವಿವಿಧ ಸಮಿತಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು. ಚಂದ್ರಶೇಖರ ಭಟ್ ಬಲ್ಲಾಡಿ ಸ್ವಾಗತಿಸಿದರು. ಚೈತ್ರ ಕಬ್ಬಿನಾಲೆ ನಿರೂಪಿಸಿದರು. ಚಂದ್ರಶೇಖರ ಬಾಯರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.