ಹೆಬ್ರಿ: ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಮುನಿಯಾಲು ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಗುರುವಾರ ನಡೆಯಿತು.

ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಹಾಗೂ ಉದ್ಯಮಿ ಪಡುಪರ್ಕಳ ಹರೀಶ ಶೆಟ್ಟಿ ಮಾತನಾಡಿ ಶಾಲೆ ಶತಮಾನೋತ್ಸವದ ಸಂಭ್ರಮದಲ್ಲಿದ್ದು ಆ ವೈಭವಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಲನೆ ನೀಡಿದರು.

ಪಡುಕುಡೂರು ಭದ್ರಕಾಳಿ ದೇವಸ್ಥಾನದ ಅರ್ಚಕ, ಹಳೆಯ ವಿದ್ಯಾರ್ಥಿ ರವಿರಾಜ್ ಉಪಾಧ್ಯಾಯ ಕಲೋತ್ಸವ ಉದ್ಘಾಟಿಸಿ ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಗಳ ವಿಕಾಸಕ್ಕೆ ದಾರಿಯಾಗುತ್ತದೆ ಎಂದರು.

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾ ಕಾರಂಜಿ ಕಲೋತ್ಸವದ ಮುನ್ನ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರುಬೀಡು ಎಂ.ಡಿ.ಅಧಿಕಾರಿ ಪುತ್ಥಳಿಗೆ ಪಡುಪರ್ಕಳ ಹರೀಶ ಶೆಟ್ಟಿ ಮಾಲಾರ್ಪಣೆ ಮಾಡಿ ಗೌರವಿಸಿದರು.

ಕಲ್ಲಬೆಟ್ಟು ದರ್ಕಾಸು ಶಂಕರ ನಾರಾಯಣ ನಾಯಕ್ ಸೇರಿದಂತೆ ಹಲವರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹರೀಶ ಪೂಜಾರಿ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಶತಮಾನೋತ್ಸವ ಆಚರಣೆ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಸಿಆರ್ಪಿ ರಾಘವೇಂದ್ರ ಆಚಾರ್ಯ, ಪ್ರಮುಖರಾದ ರಮಾನಂದ ಶೆಟ್ಟಿ, ಹೃದಯ ಕುಮಾರ್ ಶೆಟ್ಟಿ, ಶ್ರೀನಿವಾಸ ಆಚಾರ್ಯ, ರವೀಂದ್ರ ಶೆಟ್ಟಿ, ಶಂಕರ ಶೆಟ್ಟಿ ಮಾವಿನಕಟ್ಟೆ, ಭಾಸ್ಕರ ಶೆಟ್ಟಿ, ಉಮಾಶಂಕರ್, ಅಮಿತಾ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯೆ ತಾರಾವತಿ ಶೆಟ್ಟಿ, ಸುಮನಾ ಭಟ್, ಲಕ್ಷ್ಮಿ, ಶಕುಂತಳಾ ಶೆಟ್ಟಿ, ಉಷಾ, ರಂಜಿತಾ ಪೂಜಾರಿ, ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ಹರೀಶ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುದರ್ಶನ್ ಶೆಟ್ಟಿ ನಿರೂಪಿಸಿದರು. ಶೃತಿ ಆಚಾರ್ಯ ವಂದಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗ ಪಡುಕುಡೂರು ಭದ್ರಕಾಳಿ ದೇವಸ್ಥಾನದ ಅರ್ಚಕ ರವಿರಾಜ್ ಉದ್ಘಾಟನೆ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.