ಹೆಬ್ರಿ: ‘ಮಾನಸಿಕ, ದೈಹಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯಕ. ಅದು ಆತ್ಮಸ್ಥೈರ್ಯವನ್ನು, ದೈಹಿಕ ಕ್ಷಮತೆಯನ್ನು ಹೆಚ್ಚಿಸಿ ಆರೋಗ್ಯ ಕಾಪಾಡುತ್ತವೆ. ರಜತ ಮಹೋತ್ಸವ ಆಚರಣೆಯಲ್ಲಿರುವ ಶಿಶುಮಂದಿರದಲ್ಲಿ ಆಟೋಟ ಸ್ಪರ್ಧೆ ಆಯೋಜಿಸಿ ಎಲ್ಲರನ್ನೂ ಒಂದುಗೂಡಿಸುವ ಪ್ರಯತ್ನ ಉತ್ತಮ ಕಾರ್ಯ’ ಎಂದು ಸೇವಾ ಸಂಗಮ ಶಿಶು ಮಂದಿರದ ಗೌರವಾಧ್ಯಕ್ಷ, ನಿವೃತ್ತ ಶಿಕ್ಷಕ ಗಣಪತಿ ಪೈ ಹೇಳಿದರು.

ಮುದ್ರಾಡಿ ಸುಬ್ಬಣ್ಣಕಟ್ಟೆ ಸೇವಾಸಂಗಮ ಶಿಶುಮಂದಿರದ ರಜತ ಮಹೋತ್ಸವ ಅಂಗವಾಗಿ ನಡೆದ ಮಹಿಳೆಯರ, ಪುರುಷರು, ಹಳೆವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಮಂದಿರದ ವ್ಯವಸ್ಥಾಪಕಿ ಶಿಲ್ಪಾ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅಧ್ಯಕ್ಷೆ ಸುನೀತಾ ಹೆಬ್ಬಾರ್, ರಜತ ಮಹೋತ್ಸವ ಸಮಿತಿ ಗೌರವ ಸಲಹೆಗಾರ ಸಂತೋಷ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಸಮಿತಿ ಉಪಾಧ್ಯಕ್ಷೆ ಸುಲತಾ ಗಂಗಾಧರ ಹೆಗ್ಡೆ, ಜೊತೆ ಕಾರ್ಯದರ್ಶಿ ಅನುಶ್ರೀ ಮಲ್ಯ, ಶಿಕ್ಷಕಿ ಸುಮತಿ, ವ್ಯವಸ್ಥಾಪನಾ ಸಮಿತಿ, ರಜತ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಶಿಕ್ಷಕಿಯರು, ಬಾಲಗೋಕುಲ ಮಕ್ಕಳು ಭಾಗವಹಿಸಿದ್ದರು.

ಶಿಶುಮಂದಿರದ ಸಂಚಾಲಕ ಶ್ರೀಧರ ನಾಯಕ್ ಸ್ವಾಗತಿಸಿದರು. ಬಲ್ಲಾಡಿ ಚಂದ್ರಶೇಖರ ಭಟ್ ನಿರೂಪಿಸಿದರು. ಸಮಿತಿ ಜತೆ ಕಾರ್ಯದರ್ಶಿ ಅಶ್ವಿನಿ ಶೆಟ್ಟಿಗಾರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-28-484658002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.