ಹೆಬ್ರಿ: ‘ಸುಧಾಕರ ಶೆಟ್ಟಿ ಅವರು ಸ್ನೇಹಜೀವಿ. ಮಾತೃ ಹೃದಯದ ಪರಿಪೂರ್ಣ ಶಿಕ್ಷಕ. ಬೆಳ್ತಂಗಡಿ ತಾಲ್ಲೂಕಿನಲ್ಲಿ ಸುಧಾಕರ ಶೆಟ್ಟಿ ಅವರ ಸೇವೆಗೆ ಪ್ರಶಂಸೆ ಇದೆ’ ಎಂದು ಬೆಳ್ತಂಗಡಿ ತಾಲ್ಲೂಕು ಶಿಕ್ಷಣ ಸಮನ್ವಯ ಅಧಿಕಾರಿ ಜಗದೀಶ್ ಎಚ್. ಹೇಳಿದರು.

ಅವರು 30 ವರ್ಷ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತರಾದ ಇಲ್ಲಿನ ಇಂದಿರಾ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸುಧಾಕರ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ತಹಶೀಲ್ದಾರ್ ಎಸ್.ಎ. ಪ್ರಸಾದ್ ಮಾತನಾಡಿ, ಸರ್ಕಾರಿ ನೌಕರಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಕಪ್ಪುಚುಕ್ಕೆ ಇಲ್ಲದೆ ನಿವೃತ್ತರಾಗುವುದು ಪ್ರಾಮುಖ್ಯ. ಸುಧಾಕರ ಶೆಟ್ಟಿ ಅವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ ಎನ್ನುವುದಕ್ಕೆ ಇಂದಿನ ಸಂಭ್ರಮವೇ ಸಾಕ್ಷಿ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜ್ಯೋತಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಎಸ್. ಬಂಗೇರ ಉದ್ಘಾಟಿಸಿದರು.

ಶಿಕ್ಷಕ ಸುಧಾಕರ ಶೆಟ್ಟಿ, ಪತ್ನಿ ಲೀಲಾ ಶೆಟ್ಟಿ ಅವರನ್ನು ಇಂದಿರಾ ನಗರ ಶಾಲೆ, ಶಾಲಾಭಿವೃದ್ಧಿ ಸಮಿತಿ, ವಿದ್ಯಾರ್ಥಿಗಳು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ವಲಯ, ಬೆಳ್ತಂಗಡಿ ತಾಲ್ಲೂಕಿನ ಶಾಲಾ ಶಿಕ್ಷಕ ವೃಂದ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಹೆಬ್ರಿ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಪೋಷಕರು ಸನ್ಮಾನಿಸಿದರು.

ಹೆಬ್ರಿ ಸರ್ಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಸದಾಶಿವ ಸೇರ್ವೆಗಾರ್, ಕಾರ್ಯದರ್ಶಿ ಗಣೇಶ್ ಕುಲಾಲ್, ಖಜಾಂಚಿ ಚಿದಾನಂದ ಸ್ವಾಮಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಬಿ.ಕೆ. ಉಮೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಮಾಲತಿ, ಸಿಆರ್ಪಿ ರಾಘವೇಂದ್ರ ಆಚಾರ್, ಸುನಿಲ್ ಭಂಡಾರಿ, ಆಶಾ, ಹೆಬ್ರಿ ವ್ಯವಸಾಯಿಕ ಸಹಕಾರಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ನಾಯ್ಕ್, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಎಸ್.ಆರ್, ಕೋಆರ್ಡಿನೇಟರ್ ಸಂತೋಷ ಕುಮಾರ್ ಶೆಟ್ಟಿ, ಶಿಕ್ಷಕರ ಸಂಘದ ಮಂಗಳೂರು ವಿಭಾಗದ ಪೂರ್ವಾಧ್ಯಕ್ಷ ಶಿವಶಂಕರ್ ಭಟ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಕಾರ್ಕಳ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಉಪಾಧ್ಯಕ್ಷ ಮಂಜುನಾಥ ಶೆಟ್ಟಿ, ಸಿಆರ್ಪಿ ಪ್ರೀತೇಶ್ ಕುಮಾರ್ ಶೆಟ್ಟಿ, ಇಂದಿರಾನಗರ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಸಂತೋಷ್, ಶಿಕ್ಷಕರು, ಸಮಿತಿ ಸದಸ್ಯರು, ಅಧಿಕಾರಿಗಳು, ಪೋಷಕರು ಭಾಗವಹಿಸಿದ್ದರು.

ಮುಖ್ಯಶಿಕ್ಷಕ ರಾಮಾಂಜನೇಯ ಕಮ್ಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂಡಾರಬೆಟ್ಟು ಶಾಲೆ ಮುಖ್ಯಶಿಕ್ಷಕ ಸತೀಶ್ಚಂದ್ರ ಬಾಬು ನಿರೂಪಿಸಿದರು. ಶಿಕ್ಷಕರಾದ ಅನಿತಾ ವಂದಿಸಿದರು. ಗೌತಮಿ ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.